Friday, May 17, 2024
Homeಕರಾವಳಿಕುಕ್ಕೆ ಸುಬ್ರಹ್ಮಣ್ಯದಲ್ಲಿ ಐಇಸಿ ಪೂರ್ವಭಾವಿ ಸಭೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಐಇಸಿ ಪೂರ್ವಭಾವಿ ಸಭೆ

spot_img
- Advertisement -
- Advertisement -

ಸುಬ್ರಮಣ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಒಳಪಡುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಮಾಹಿತಿ ಶಿಕ್ಷಣ ಸಂವಹನ ಚಟುವಟಿಕೆ ಕೈಗೊಳ್ಳುವ ಸಲುವಾಗಿ ಸುಬ್ರಹ್ಮಣ್ಯದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ)  ನೋಡಲ್ ಅಧಿಕಾರಿ ಕೆ. ಆನಂದ ಕುಮಾರ್ ಸಭೆಯಲ್ಲಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. 

ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತಾಧಿಕಾರಿಯವರನ್ನು ಭೇಟಿ ಮಾಡಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಚರ್ಚೆ ನಡೆಸಿದರು. ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರು,  ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕುಕ್ಕೆ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!