Thursday, June 4, 2026
Homeತಾಜಾ ಸುದ್ದಿಬಿಜೆಪಿಯ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ: ಸಿದ್ದರಾಮಯ್ಯ

ಬಿಜೆಪಿಯ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ: ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂಥ ಅಮಾಯಕ ಯುವಕರ ರಕ್ತ ಇದೆ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ‌ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!