Friday, May 3, 2024
Homeತಾಜಾ ಸುದ್ದಿಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಪ್ರತಿ ತಿಂಗಳು ₹2000 ಹಣ ವಿತರಣೆ: ಡಿ.ಕೆ. ಶಿವಕುಮಾರ್ ಘೋಷಣೆ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಪ್ರತಿ ತಿಂಗಳು ₹2000 ಹಣ ವಿತರಣೆ: ಡಿ.ಕೆ. ಶಿವಕುಮಾರ್ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ ಯೋಜನೆ ಹೆಸರಿನಲ್ಲಿ ರಾಜ್ಯದ ಮಹಿಳೆಯರಿಗೆ 2,000 ರೂ. ನೀಡಲಾಗುವುದು  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದರು.

ಬೆಂಗಳೂರಿನಲ್ಲಿ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ಅವರು ಈ ಘೋಷಣೆ ಮಾಡಿದರು. ಇಡೀ ಕುಟುಂಬದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗಾಗಿ ಈ ಕೊಡುಗೆ ನೀಡುತ್ತಿದ್ದೇವೆ. ಯೋಜನೆಯ ಭರವಸೆಯೊಂದಿಗೆ ಗ್ಯಾರಂಟಿ ಚೆಕ್ ಅನ್ನು ಈಗಲೇ ನೀಡುತ್ತಿದ್ದೇವೆ ಎಂದು ಶಿವಕುಮಾರ್ ಹೇಳಿದರು. ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವ ಬಗ್ಗೆಯೂ ಅವರು ಭರವಸೆ ನೀಡಿದರು. ಇದಕ್ಕೆ ಪ್ರಿಯಾಂಕಾ ಗಾಂಧಿ ದನಿಗೂಡಿಸಿದರು.

- Advertisement -
spot_img

Latest News

error: Content is protected !!