Wednesday, June 3, 2026
Homeತಾಜಾ ಸುದ್ದಿRSS ಪ್ಯಾಂಟು ತೊಟ್ಟವನಿಗೆ ಕಾಂಗ್ರೆಸ್ ವೇಷ ತೊಡಿಸಿದ್ರೆ ಕಾಗೆ ನವಿಲಾಗುತ್ತಾ? ಕಾಂಗ್ರೆಸ್

RSS ಪ್ಯಾಂಟು ತೊಟ್ಟವನಿಗೆ ಕಾಂಗ್ರೆಸ್ ವೇಷ ತೊಡಿಸಿದ್ರೆ ಕಾಗೆ ನವಿಲಾಗುತ್ತಾ? ಕಾಂಗ್ರೆಸ್

- Advertisement -
- Advertisement -

ಬೆಂಗಳೂರು: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ಎಸ್ ಪ್ಯಾಂಟು ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ? ಎಂದು ಕರ್ನಾಟಕ ಕಾಂಗ್ರೆಸ್ ಬಿಜೆಪಿಗೆ ಖಾರವಾಗಿಯೇ ಪ್ರಶ್ನಿಸಿದೆ.

ಸಂಪತ್ ಕಾಂಗ್ರೆಸ್ ಕಾರ್ಯಕರ್ತ ಎಂಬ ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ಫೋಟೋ ಸಹಿತ ಸತ್ಯ ಬಿಚ್ಚಿಟ್ಟಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿದ್ದ ಸಂಪತ್ ಆರ್ ಎಸ್ ಎಸ್ ಸಮವಸ್ತ್ರ ಧರಿಸಿರುವ ಪೋಟೋ ಹಂಚಿಕಿೊಂಡಿದೆ.  ಬಿಜೆಪಿ ಮತ್ತು ಆರ್ ಎಸ್ಎಸ್ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ, ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ ಎಂದು ತಿರುಗೇಟು ನೀಡಿದೆ.

- Advertisement -

Latest News

error: Content is protected !!