Saturday, May 18, 2024
Homeಕರಾವಳಿಬೆಳ್ತಂಗಡಿ :ಆಭಯ ಆಸ್ಪತ್ರೆಯಲ್ಲಿ ಅಕ್ರಮ ಸ್ಕ್ಯಾನಿಂಗ್ ಸೆಂಟರ್ : ಡಿಹೆಚ್ಓ ಆಸ್ಪತ್ರೆಗೆ ದಾಳಿ ಮಾಡಿ ಮೆಷಿನ್...

ಬೆಳ್ತಂಗಡಿ :ಆಭಯ ಆಸ್ಪತ್ರೆಯಲ್ಲಿ ಅಕ್ರಮ ಸ್ಕ್ಯಾನಿಂಗ್ ಸೆಂಟರ್ : ಡಿಹೆಚ್ಓ ಆಸ್ಪತ್ರೆಗೆ ದಾಳಿ ಮಾಡಿ ಮೆಷಿನ್ ಸೀಝ್

spot_img
- Advertisement -
- Advertisement -

ಬೆಳ್ತಂಗಡಿ : ನಿಯಮಾನುಸಾರ ನೋಂದಣಿ ಮಾಡದೆ ಖಾಸಗಿ ಆಭಯ ಆಸ್ಪತ್ರೆಯಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಪತ್ತೆ ಹಚ್ಚಿ ಆರೋಗ್ಯ ಇಲಾಖೆ ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ನಗರದ ಗುರುವಾಯನಕೆರೆಯಲ್ಲಿ ಕಾರ್ಯಚರಿಸುತ್ತಿದ್ದ ಅಭಯ ಆಸ್ಪತ್ರೆಗೆ ಡಿ.28 ರಂದು ಗುರುವಾರ ಮಂಗಳೂರು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ ಅವರು ನೇತೃತ್ವದಲ್ಲಿ ಅಧಿಕಾರಿ ತಂಡವು ದಾಳಿ ಮಾಡಿ ಪರಿಶೀಲನೆ ನಡೆಸಿದ ವೇಳೆ ನೋಂದಣಿ ಮಾಡದೆ ಅಕ್ರಮವಾಗಿ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರ ಕಂಡು ಬಂದಿದೆ.

ಸ್ಕ್ಯಾನಿಂಗ್ ಯಂತ್ರವನ್ನು ಬಳಸಲು ನಿಯಮಾನುಸಾರ ಆರೋಗ್ಯ ಇಲಾಖೆಯಲ್ಲಿ ನೋಂದಣಿ ಮಾಡದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ತಕ್ಷಣವೇ ಸ್ಕ್ಯಾನಿಂಗ್ ಯಂತ್ರವನ್ನು ವಶಪಡಿಸಿಕೊಂಡು ಜಪ್ತಿ ಮಾಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಪಾ ಪ್ರಭು ಮತ್ತಿತ್ತರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಮುಂದಿನ ದಿನಗಳಲ್ಲಿ ಅಕ್ರಮವಾಗಿ ಸ್ಕ್ಯಾನಿಂಗ್ ಯಂತ್ರ ಬಳಕೆ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸುವುದಾಗಿ ಜಿಲ್ಲಾ ಆರೋಗ್ಯ ಅಧಿಕಾರಿ ಎಚ್ಚರಿಕೆ ನೀಡಿದ್ದಾರೆ.

- Advertisement -
spot_img

Latest News

error: Content is protected !!