Thursday, June 4, 2026
Homeಕರಾವಳಿಸುಳ್ಯ: ಮಾರುತಿ 800 ಕಾರಿನಲ್ಲಿ ಅಕ್ರಮ ಗೋ ಸಾಗಾಟ : ಆರೋಪಿಯನ್ನು ಬಂಧಿಸಿದ ಪೊಲೀಸರು

ಸುಳ್ಯ: ಮಾರುತಿ 800 ಕಾರಿನಲ್ಲಿ ಅಕ್ರಮ ಗೋ ಸಾಗಾಟ : ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಸುಳ್ಯ: ಮಾರುತಿ 800 ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಸುಳ್ಯದ ಬೆಳ್ಳಾರೆಯಲ್ಲಿ ನಡೆದಿದೆ. ವಿನಯ್ ಬಂಧಿತ ಆರೋಪಿ.

ಮಾರುತಿ 800 ಕಾರಿನಲ್ಲಿ ದನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆ ಕಾರ್ಯಕರ್ತರು ಬೂಡು ಸೇತುವೆ ಸಮೀಪ ಕಾರನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಮಾಹಿತಿ ನೀಡಿದರು ಎಂದು ತಿಳಿದುಬಂದಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ವಿನಯ್ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ. ದನವನ್ನು ಆಲಂಗಾರಿನಿಂದ ಬೆಳ್ಳಾರೆ ಮಾರ್ಗವಾಗಿ ಮರ್ಕಂಜಕ್ಕೆ ಕೊಂಡೊಯ್ಯತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!