Monday, June 8, 2026
Homeಕರಾವಳಿಉಡುಪಿಉಡುಪಿ; ಅಕ್ರಮವಾಗಿ ಮಗು ಮಾರಾಟ; ತಂದೆ ತಾಯಿ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

ಉಡುಪಿ; ಅಕ್ರಮವಾಗಿ ಮಗು ಮಾರಾಟ; ತಂದೆ ತಾಯಿ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಉಡುಪಿ; ಅಕ್ರಮವಾಗಿ ಹೆಣ್ಣು ಮಗುವನ್ನು ಮಾರಾಟ ಮಾಡಿದ ಬಗ್ಗೆ ತಂದೆ ತಾಯಿ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜು.19ರಂದು ಪೆರಂಪಳ್ಳಿಯ ಶೀಂಬ್ರಾ ಭಟ್ರಕೋಡಿಯ ರಾಬಿಯಾ ಬಾನು ಮತ್ತು ಖಾಲಿದ್ ಸಯ್ಯದ್ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಆ ಹೆಣ್ಣು ಮಗುವನ್ನು ದಂಪತಿ ಮುಲ್ಕಿಯ ನಿವಾಸಿ ವಾಜಿದ್ ಎಂಬವರಿಗೆ ಕಾನೂನು ಬಾಹಿರವಾಗಿ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.

ರಾಬಿಯಾ ಬಾನು ಮತ್ತು ಖಾಲಿದ್ ಸಯ್ಯದ್ ಮಗುವನ್ನು ಅನಧಿಕೃತವಾಗಿ ಮಾರಾಟ ಮಾಡಿದ್ದು ಮತ್ತು ವಾಜಿದ್ ಮಗುವನ್ನು ಅನಧಿಕೃತವಾಗಿ ಪಡೆದುಕೊಂಡಿರುವುದಾಗಿ ಆರೋಪಿಸಲಾಗಿದೆ.ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!