Monday, April 29, 2024
Homeಅಪರಾಧಕಾಸರಗೋಡು ಕಡೆಯಿಂದ ಉಳ್ಳಾಲಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ದನದ ಮಾಂಸ- ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ...

ಕಾಸರಗೋಡು ಕಡೆಯಿಂದ ಉಳ್ಳಾಲಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ದನದ ಮಾಂಸ- ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು

spot_img
- Advertisement -
- Advertisement -

ಕೇರಳ: ಕಾಸರಗೋಡು ಕಡೆಯಿಂದ ಉಳ್ಳಾಲಕ್ಕೆ ಅಕ್ರಮವಾಗಿ ದನದ ಮಾಂಸವನ್ನು ಸಾಗಾಟ ಮಾಡುತ್ತಿದ್ದ KA 19 MD 1861 ಮಾರುತಿ ಈಕೋ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರಿನಲ್ಲಿ 1 ಕ್ವಿಂಟಲ್ 60 ಕೆ ಜಿ ದನದ ಮಾಂಸವನ್ನು ಇಂದು ಪತ್ತೆ ಹಚ್ಚಲಾಗಿದೆ.

ಕಾಸರಗೋಡು ತಾಲೂಕು ಬಂದ್ಯೋಡು ಎಂಬಲ್ಲಿನ ಮೊಹಮ್ಮದ್ ಎಂಬವರಿಂದ ದನವನ್ನು ಖರೀದಿಸಿ ಅವರ ಮನೆಯಲ್ಲೇ ದನವನ್ನು ಕಡಿದು ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡುವುದಾಗಿದೆ. ಈಕೋ ಕಾರಿನಲ್ಲಿ ದನದ ಮಾಂಸ ಮೂರು ತಲೆಗಳು ದನದ ಚರ್ಮಗಳು ಪತ್ತೆಯಾಗಿದೆ.

ಪ್ರಕರಣದಲ್ಲಿ ನಾಲ್ಕು ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ಹುಸೇನ್ (24), ಮಹಮ್ಮದ್ ಮು ಜಾಂಬಿಲ್ (25) , ಮಹಮ್ಮದ್ ಅಮೀನ್ (21 ), ಸೋಹೈಬ್ ಅಕ್ತರ್ (22) ಎಂಬವರನ್ನು ದಸ್ತಗಿರಿ ಮಾಡಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು ರೂಪಾಯಿ 3,10,000/- ತಿಳಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಮ್ ಶಂಕರ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್.ಬಿ.ಪಿ ರವರ ಮಾರ್ಗದರ್ಶನದಲ್ಲಿ ನಗರ ಅಪರಾಧ ಪತ್ತೆ ವಿಭಾಗದ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ರವರ ನೇತೃತ್ವದಲ್ಲಿ ಪಿ.ಎಸ್.ಐ ರಾಜೇಂದ್ರ, ಎ.ಎಸ್.ಐ ಮೋಹನ್ ಸಿಬ್ಬಂದಿಗಳಾದ ಸುಬ್ರಹ್ಮಣ್ಯ ಕೆ. ಎನ್, ಮಣಿ ಎಂ. ಎನ್, ಅಬ್ದುಲ್ ಜಬ್ಬಾರ್, ಸುನಿಲ್ ಕುಮಾರ್ ಹಾಗೂ ಎ.ಆರ್.ಎಸ್.ಐ ತೇಜ ಕುಮಾರ್ ಭಾಗವಸಿದ್ದರು.

- Advertisement -
spot_img

Latest News

error: Content is protected !!