- Advertisement -
![]()
- Advertisement -
ಮಂಗಳೂರು: ಇಲ್ಲಿನ ಕದ್ರಿ ದೇವಸ್ಥಾನದ ದ್ವಾರದ ಬಳಿಯಲ್ಲಿ ವಾಹನವೊಂದರಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿರುವ ಮಾಹಿತಿ ಭಜರಂಗದಳ ಕಾರ್ಯಕರ್ತರಿಗೆ ಸಿಕ್ಕಿದ್ದು ಅದರಂತೆಯೇ ಭಜರಂಗದಳದ ಕಾರ್ಯಕರ್ತರು ಪರಿಶೀಲಿಸಿದಾಗ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಘಟನೆ ಮಾ.10 ಸೋಮವಾರದಂದು ಬೆಳಕಿಗೆ ಬಂದಿದೆ.
ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಟೆಂಪೋದಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದ್ದು, ಘಟನೆಯ ಬಗ್ಗೆ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತಿದ್ದಂತೆ ಕದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಸುಮಾರು 100 ಕೆ.ಜಿಗೂ ಅಧಿಕ ಗೋ ಮಾಂಸ ಇರುವುದು ಕಂಡುಬಂದಿದೆ.
ಗೋ ಮಾಂಸ ಹಾಗೂ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದು, ಘಟನೆಯ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -


