Saturday, June 6, 2026
Homeಕರಾವಳಿಉಡುಪಿಉಡುಪಿ: ಕಾರಿನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ: ಆರೋಪಿಯ ಬಂಧನ

ಉಡುಪಿ: ಕಾರಿನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ: ಆರೋಪಿಯ ಬಂಧನ

- Advertisement -
- Advertisement -

ಉಡುಪಿ: ಕಾರಿನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ.

ಭಟ್ಕಳ ನಿವಾಸಿ ಮಹಮ್ಮದ್ ಗೌಸ್ ಗವಾಯಿ (37) ಬಂಧಿತ ಆರೋಪಿ. ಇನ್ನೋರ್ವ ಆರೋಪಿ ನಜ್ಮುಲ್ ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಹೋಗುತ್ತಿದ್ದ ಕಾರನ್ನು ಪೊಲೀಸರು ತಡೆದು ಪರಿಶೀಲಿಸಿದಾಗ ಪತ್ತೆಯಾಗಿದೆ. ಕಾರಿನಲ್ಲಿದ್ದ 22 ಸಾವಿರ ರೂ. ಮೌಲ್ಯದ 150 ಕೆ.ಜಿ. ಮಾಂಸವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Latest News

error: Content is protected !!