Wednesday, November 4, 2026
Homeಅಪರಾಧಬೈಕಂಪಾಡಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ; 16 ಗೋವುಗಳ ರಕ್ಷಣೆ!

ಬೈಕಂಪಾಡಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ; 16 ಗೋವುಗಳ ರಕ್ಷಣೆ!

- Advertisement -
- Advertisement -

ಮಂಗಳೂರು: ನಗರದ ಬೈಕಂಪಾಡಿ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ತಡೆದು ಕಾರ್ಯಾಚರಣೆ ನಡೆಸಿದ್ದಾರೆ.

ಬುಧವಾರ ಮುಂಜಾನೆ ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಲಾರಿಯನ್ನು ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿದ್ದ 16 ಗೋವುಗಳನ್ನು ರಕ್ಷಿಸಲಾಗಿದೆ.

KA-19-AB-2715 ನೋಂದಣಿ ಸಂಖ್ಯೆಯ ಲಾರಿಯಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಬೈಕಂಪಾಡಿ ಪರಿಸರದಲ್ಲಿ ಪಣಂಬೂರು ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಗೋವುಗಳನ್ನು ರಕ್ಷಿಸಿದ್ದಾರೆ.

ಈ ಭಾಗದಲ್ಲಿ ಅಕ್ರಮ ಗೋ ಸಾಗಾಟ ನಿರಂತರವಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!