Thursday, June 4, 2026
Homeಕರಾವಳಿಬೆಳ್ತಂಗಡಿಯಲ್ಲಿ ಗಾಂಜಾ ಸಾಗಾಟ ಪತ್ತೆ; ಇಬ್ಬರ ಬಂಧನ!

ಬೆಳ್ತಂಗಡಿಯಲ್ಲಿ ಗಾಂಜಾ ಸಾಗಾಟ ಪತ್ತೆ; ಇಬ್ಬರ ಬಂಧನ!

- Advertisement -
- Advertisement -

ಬೆಳ್ತಂಗಡಿ :ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳ್ತಂಗಡಿ ಠಾಣೆ ಪೊಲೀಸರು ಸಪರಬೈಲು ಎಂಬಲ್ಲಿ ಶುಕ್ರವಾರ ಸಂಜೆ ಬಂಧಿಸಿದ್ದಾರೆ.

ಮದ್ದಡ್ಕದ ಚಿಲಿಂಬಿ ನಿವಾಸಿ ಮುಹಮ್ಮದ್ ರಫೀಕ್ (35) ಮತ್ತು ಆಲಂದಿಲ ನಿವಾಸಿ ನೌಫಲ್ (25) ಬಂಧಿತ ಆರೋಪಿಗಳು.

ಬೆಳ್ತಂಗಡಿ ಎಸ್‌ಐ ನಂದಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯ ಸಬರಬೈಲು ಎಂಬಲ್ಲಿ ಸಂಜೆ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಮದ್ದಡ್ಕ ಕಡೆಯಿಂದ ಬೆಳ್ತಂಗಡಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಬರುತ್ತಿದ್ದಾಗ ವಾಹನ ತಡೆದು ತಪಾಸಣೆ ನಡೆಸಿದ ವೇಳೆ ಗಾಂಜಾ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳ ವಶದಲ್ಲಿದ್ದ ಸುಮಾರು 45,850 ರೂ ಮೌಲ್ಯದ ಒಟ್ಟು 1,310 ಗ್ರಾಂ ಗಾಂಜಾವನ್ನು ಹಾಗೂ ಸಾಗಾಟಕ್ಕೆ ಬಳಸಿದ ಮೋಟಾರ್ ಸೈಕಲ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!