Sunday, June 7, 2026
Homeಅಪರಾಧಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ : 17.54 ಲಕ್ಷ ರೂ. ಮೌಲ್ಯದ ಚಿನ್ನ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ : 17.54 ಲಕ್ಷ ರೂ. ಮೌಲ್ಯದ ಚಿನ್ನ ವಶ!

- Advertisement -
- Advertisement -

ಮಂಗಳೂರು : ಅ.12 ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮುಂಜಾನೆ ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಹೊರಟ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಮಂಗಳವಾರ ನಸುಕಿನ ಜಾವ 2 ಗಂಟೆ‌ ಸುಮಾರಿಗೆ ಮಂಗಳೂರು ವಿಮಾಣ ನಿಲ್ದಾಣ ತಲುಪಿದೆ. ತಪಾಸಣೆ ವೇಳೆ ಪ್ರಯಾಣಿಕನೊಬ್ಬನಲ್ಲಿ 364 ಗ್ರಾಂ ತೂಕದ 17.54 ಲಕ್ಷ ರೂ. ಮೌಲ್ಯದ ಶುದ್ಧ ಚಿನ್ನವು ದ್ರವರೂಪದಲ್ಲಿ ಪತ್ತೆಯಾಗಿದೆ. ಇದನ್ನು ಗಮ್‌ನೊಂದಿಗೆ ಮಿಶ್ರಣ ಮಾಡಿ, ಕಂದು ಬಣ್ಣದ ಶೀಟ್‌ವೊಂದರಲ್ಲಿ ಪ್ರಯಾಣಿಕ ಅಡಗಿಸಿಟ್ಟಿದ್ದ. ಇದನ್ನು ಟ್ರಾಲಿಯ ಕೆಳಭಾಗದ ಎರಡು ಪದರುಗಳ ಆಳದಲ್ಲಿ ಇರಿಸಿ, ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ ಎಂದು ತಿಳಿದುಬಂದಿದೆ.

ಬಂಧಿತ ಪ್ರಯಾಣಿಕನಿಂದ ಒಟ್ಟು17.54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!