Wednesday, June 24, 2026
Homeಕರಾವಳಿಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.18 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಣೆ ಪತ್ತೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.18 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಣೆ ಪತ್ತೆ

- Advertisement -
- Advertisement -

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಭಾರಿ ಪ್ರಮಾಣದ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಕಳೆದ ಮೂರು ದಿನದಲ್ಲಿ 1.18 ಕೋಟಿ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ.

ಇಂದು ಮಂಗಳೂರು ಉಳ್ಳಾಲದ ಮೊಹಮ್ಮದ್ ಆಸೀಫ್ ಎಂಬ ವ್ಯಕ್ತಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಕಸ್ಟಮ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈತ ಇಂದು ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದನು. ಈತನನ್ನು ತಪಾಸಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳಿಗೆ 1.993 ಕೆಜಿ ಚಿನ್ನ ಪೌಡರ್ ರೂಪದಲ್ಲಿ ಸಿಕ್ಕಿದೆ.

ಇದರ‌ ಮೌಲ್ಯ ರೂ 92.27 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಚಿನ್ನವನ್ನು ಈತ ವಿಶೇಷವಾಗಿ ಡಿಸೈನ್ ಮಾಡಲಾದ ಒಳ ಉಡುಪು, ಜೀನ್ಸ್ ಪ್ಯಾಂಟ್ ಮತ್ತು ‌ಮೊಣಕಾಲು ಬ್ಯಾಂಡ್ ಮೂಲಕ ತಂದಿದ್ದನು. ಚಿನ್ನ ಮತ್ತು ಪ್ರಯಾಣಿಕನನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಮೂರು ದಿನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿರುವ ಮೂರನೇ ಪ್ರಕರಣ ಇದಾಗಿದೆ. ಮೂರು ಪ್ರಕರಣದಲ್ಲಿ 2,569 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ರೂ 1,18,71,430 ಎಂದು ಅಂದಾಜಿಸಲಾಗಿದೆ.

- Advertisement -

Latest News

error: Content is protected !!