Sunday, June 7, 2026
Homeಕರಾವಳಿಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: ಐದು ಮಂದಿ ಬಂಧನ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: ಐದು ಮಂದಿ ಬಂಧನ

- Advertisement -
- Advertisement -

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟದ ಜಾಲವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಅ.22ರಿಂದ 31ರ ತನಕ 1,46,87,410 ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಪೇಸ್ಟ್‌ ರೂಪದಲ್ಲಿದ್ದ ಚಿನ್ನವನ್ನ ದೇಹದ ವಿವಿಧ ಭಾಗಗಳಲ್ಲಿ ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಪತ್ತೆ ಹಚ್ಚಿದ್ದಾರೆ. ಐವರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!