Sunday, June 7, 2026
Homeಕರಾವಳಿಮಂಗಳೂರು : ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನ ; 663 ಗ್ರಾಂ ಚಿನ್ನ...

ಮಂಗಳೂರು : ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನ ; 663 ಗ್ರಾಂ ಚಿನ್ನ ವಶಕ್ಕೆ!

- Advertisement -
- Advertisement -

ಮಂಗಳೂರು : ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೋರ್ವ ದುಬೈಯಿಂದ 32,55,330 ರೂ. ಮೌಲ್ಯದ 663 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -

Latest News

error: Content is protected !!