Wednesday, May 15, 2024
Homeಕರಾವಳಿಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ; ವ್ಯಕ್ತಿಯನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ; ವ್ಯಕ್ತಿಯನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

spot_img
- Advertisement -
- Advertisement -

ಮಂಗಳೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 107 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇಂಡಿಗೋ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ದುಬೈನಿಂದ ಬಂದಿಳಿದ ಪ್ರಯಾಣಿಕನನ್ನು ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸಂಶಯದ ಮೇರೆಗೆ ತಡೆದು ವಿಚಾರಣೆ ನಡೆಸಿದ್ದು, ಪ್ರಯಾಣಿಕನ ಬಳಿಯಿದ್ದ ಡಬಲ್ ಲೇಯರ್ ಬಿಸ್ಕತ್ ಮತ್ತು ಚಾಕೋಲೆಟ್ ಹೊಂದಿರುವ ಎರಡು ರಟ್ಟಿನ ಪೆಟ್ಟಿಗೆಗಳನ್ನು ವಶಪಡಿಸಲಾಗಿದೆ. ಚಾಕೋಲೆಟ್ ಪೆಟ್ಟಿಗೆಯಲ್ಲಿ ಚಿನ್ನವನ್ನು ಮುಚ್ಚಿಡಲಾಗಿತ್ತು.

ಈ ಕುರಿತು ಪರಿಶೀಲನೆ ನಡೆಸಿದಾಗ ಒಟ್ಟು 107 ಗ್ರಾಂ ಚಿನ್ನ ವ್ಯಕ್ತಿಯಲ್ಲಿ ಪತ್ತೆಯಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಈ 107 ಗ್ರಾಂ ಚಿನ್ನದ ಮೌಲ್ಯ ರೂ. 6,47,350 ಎಂದು ಅಂದಾಜಿಸಲಾಗಿದೆ.

- Advertisement -
spot_img

Latest News

error: Content is protected !!