- Advertisement -


- Advertisement -
ಬೆಂಗಳೂರು: ವೈಟ್‌ಫೀಲ್ಡ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ವಿಭಾಗಗಳು ನಡೆಸುತ್ತಿರುವ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ ವೇಳೆ ಅಕ್ರಮವಾಗಿ ವಾಸಿಸುತ್ತಿದ್ದ ಮತ್ತೆ 52 ಬಾಂಗ್ಲಾದೇಶಿ ಪ್ರಜೆಗಳನ್ನು ರವಿವಾರ ಬಂಧಿಸಲಾಗಿದೆ. ಶನಿವಾರ 53 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಕೇವಲ ಎರಡೇ ದಿನಗಳಲ್ಲಿ ಬಂಧಿತರಾದವರ ಸಂಖ್ಯೆ 105ಕ್ಕೇರಿದೆ.
ಅಕ್ರಮವಾಗಿ ತಂಗಿರುವವರ ಪತ್ತೆಗಾಗಿ ಪೊಲೀಸ್ ಇಲಾಖೆಯು 592 ಸಿಬ್ಬಂದಿಗಳನ್ನೊಳಗೊಂಡ 58 ವಿಶೇಷ ತಂಡಗಳನ್ನು ರಚಿಸಿದ್ದು, ಬೃಹತ್ ಮಟ್ಟದ ಶೋಧ ಕಾರ್ಯ ಮುಂದುವರಿಸಿದೆ. ಈವರೆಗೆ ಅನುಮಾನಾಸ್ಪದವಾಗಿ ಕಂಡುಬಂದ 3,000ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಿ ಪರಿಶೀಲಿಸಲಾಗಿದೆ.
- Advertisement -


