Wednesday, November 11, 2026
Homeಅಪರಾಧಹೆಜಮಾಡಿ ಚೆಕ್‌ಪೋಸ್ಟ್ ಬಳಿ ಅಕ್ರಮ ಮದ್ಯ ಸಾಗಾಟ ಪತ್ತೆ; 300 ಬಾಕ್ಸ್ ಮದ್ಯ ವಶಕ್ಕೆ, ನಾಲ್ವರು...

ಹೆಜಮಾಡಿ ಚೆಕ್‌ಪೋಸ್ಟ್ ಬಳಿ ಅಕ್ರಮ ಮದ್ಯ ಸಾಗಾಟ ಪತ್ತೆ; 300 ಬಾಕ್ಸ್ ಮದ್ಯ ವಶಕ್ಕೆ, ನಾಲ್ವರು ಆರೋಪಿಗಳು ಅರೆಸ್ಟ್

- Advertisement -
- Advertisement -

ಉಡುಪಿ: ಹೆಜಮಾಡಿ ಚೆಕ್‌ಪೋಸ್ಟ್ ಬಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 300 ಬಾಕ್ಸ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ಗೋವಾದಿಂದ ಮಂಗಳೂರಿಗೆ ಸಾಗಿಸಲಾಗುತ್ತಿದ್ದ ಬ್ಲೂ ಓಷಿಯನ್ ವಿಸ್ಕಿ ಬ್ರ್ಯಾಂಡ್‌ನ ಮದ್ಯವನ್ನು ಮಹೀಂದ್ರ ಪಿಕಪ್ ವಾಹನ ಹಾಗೂ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮದ್ಯದ ಜತೆಗೆ ಎರಡೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮ ಮದ್ಯ ಸಾಗಾಟಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

- Advertisement -

Latest News

error: Content is protected !!