Thursday, June 4, 2026
Homeಅಪರಾಧಮಣಿಪಾಲದ ಲಾಡ್ಜ್ ವೊಂದರಲ್ಲಿ ಅಕ್ರಮ ವೇಶ್ಯಾವಾಟಿಕೆ 

ಮಣಿಪಾಲದ ಲಾಡ್ಜ್ ವೊಂದರಲ್ಲಿ ಅಕ್ರಮ ವೇಶ್ಯಾವಾಟಿಕೆ 

- Advertisement -
- Advertisement -

ಮಣಿಪಾಲ: ಇಲ್ಲಿನ 80 ಬಡಗಬೆಟ್ಟು ಗ್ರಾಮದ ಖಾಸಗಿ ಲಾಡ್ಜ್ ವೊಂದರಲ್ಲಿ ಅಕ್ರಮವಾಗಿ ಹಾಗು ಲಾಭದ ಉದ್ದೇಶದಿಂದ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ದಾಳಿಯ ವೇಳೆಗೆ ಆರೋಪಿಗಳು ತಪ್ಪಿಸಿಕೊಂಡಿದ್ದು, ರೂಮ್‌ನಲ್ಲಿದ್ದ ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ. ಆಕೆಯಿಂದಲೇ ಕೃತ್ಯದ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಸಂತ್ರಸ್ತೆ ನೀಡಿರುವ ಮಾಹಿತಿಯಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಈ ಕುರಿತಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!