Friday, December 6, 2024
Homeಕರಾವಳಿಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ; ಗಾಂಜಾ ಸಹಿತ ಜೋಡಿಯ ಬಂಧನ

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ; ಗಾಂಜಾ ಸಹಿತ ಜೋಡಿಯ ಬಂಧನ

spot_img
- Advertisement -
- Advertisement -

ಉಳ್ಳಾಲ: ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ  ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಅ್ಯಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡವು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಂಧಿಸಿ, 2,04,000 ರೂ ಬೆಲೆಯ 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿದೆ.

ಬಂಧಿತ ಆರೋಪಿಗಳು ಮಾಡೂರು ನಿವಾಸಿ ನಜೀರ್ ಹುಸೈನ್ (50) ಮತ್ತು ಕಿನ್ಯಾ ರೆಹಮತ್ ನಗರದ ಅಫ್ಸಾತ್ (37) ಎನ್ನಲಾಗಿದೆ.

ಪೊಲೀಸ್ ತಂಡ ದಾಳಿ ನಡೆಸಿ ಖಚಿತ ಮಾಹಿತಿ ಮೇರೆಗೆ ಇಬ್ಬರನ್ನು ಬಂಧಿಸಿದ್ದು, ಗಾಂಜಾ ಸಹಿತ ಮಾರಾಟಕ್ಕೆ ಬಳಸಿದ್ದ ಕಾರು ಹಾಗೂ ಎರಡು ಮೊಬೈಲುಗಳನ್ನು ಹಾಗೂ ಒಟ್ಟು ರೂ. 5,14,810 ಬೆಲೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರ ವಿರುದ್ಧ 195/2024 ಕಲಂ ನಡಿ ಎನ್ ಡಿಪಿಎಸ್ ಆಕ್ಟ್ 1985 ಮತ್ತು ಬಿಎನ್ ಎಸ್ ಕಾಯಿದೆಗಳಡಿ ಪ್ರಕರಣಗಳು ದಾಖಲಾಗಿವೆ.

- Advertisement -
spot_img

Latest News

error: Content is protected !!