Saturday, June 6, 2026
Homeಕರಾವಳಿಮಂಗಳೂರು: ಅಕ್ರಮ ಮರಳು ಅಡ್ಡೆಗೆ ದಾಳಿ, ಅಧಿಕಾರಿಗಳಿಗೆ ಜೀವ ಬೆದರಿಕೆ !

ಮಂಗಳೂರು: ಅಕ್ರಮ ಮರಳು ಅಡ್ಡೆಗೆ ದಾಳಿ, ಅಧಿಕಾರಿಗಳಿಗೆ ಜೀವ ಬೆದರಿಕೆ !

- Advertisement -
- Advertisement -

ಮಂಗಳೂರು : ಫೈಸಲ್ ನಗರದಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ವೇಳೆ ಅಲ್ಲಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದಾಗ ಜೀವಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಮಂಗಳೂರು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಫೈಸಲ್ ನಗರದಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದ ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ .

ಈ ಸಂಧರ್ಭದಲ್ಲಿ ಸ್ಥಳಕ್ಕೆ 4 ಜನ ಯುವಕರು ಬಂದು ಅಧಿಕಾರಿ ಮತ್ತು ಸಿಬ್ಬಂದಿಯನ್ನು ತಡೆದು ನಿಲ್ಲಿಸಿ ದೋಣಿಗಳನ್ನು ಹುಡಿ ಮಾಡಿದರೆ ಅಧಿಕಾರಿಗಳನ್ನೂ ನಾವು ಹುಡಿ ಮಾಡುತ್ತೇವೆ ಎಂದು ಜೀವ ಬೆದರಿಕೆ ಹಾಕಿ , ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Latest News

error: Content is protected !!