Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಮರ ಕಡಿದು ಸಾಗಾಟಕ್ಕೆ ಯತ್ನ: ವೇಣೂರು ಅರಣ್ಯ ಇಲಾಖೆ ದಾಳಿ...

ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಮರ ಕಡಿದು ಸಾಗಾಟಕ್ಕೆ ಯತ್ನ: ವೇಣೂರು ಅರಣ್ಯ ಇಲಾಖೆ ದಾಳಿ ಮಾಡಿ ವಶಕ್ಕೆ

- Advertisement -
- Advertisement -

ಬೆಳ್ತಂಗಡಿ : ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ವೇಣೂರು ವಲಯ ಅರಣ್ಯ ಇಲಾಖೆ ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಪಲ್ಲದಡಿ ನಿವಾಸಿ ದಿ.ಕೊರಗಪ್ಪ ಪೂಜಾರಿ ಎಂಬವರ ಪುತ್ರ ಆರೋಪಿ ಬೆನ್ನಿಪ್ರಸಾದ್(26) ಎಂಬಾತ ತಮ್ಮ ಜಾಗದ ಸಮೀಪದ ಸರಕಾರಿ ಜಾಗದಲ್ಲಿ ಸುಮಾರು 15ರಿಂದ 20 ಆಕೇಶಿಯ, ಮ್ಯಾಂಜಿಯಂ ಸೇರಿದಂತೆ ಕೆಲ ಮರಗಳನ್ನು ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ವೇಳೆ ವೇಣೂರು ವಲಯ ಅರಣ್ಯಾಧಿಕಾರಿ ಭರತ್ ಯು.ಜಿ.ನೇತೃತ್ವದ ತಂಡ ಅ.8 ರಂದು ಬೆಳಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.

ಆರೋಪಿ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಕಡಿದ ಮರಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮಹಜರು ಪ್ರಕ್ರಿಯೆ ನಡೆಸಿದ್ದು ಈ ಕುರಿತು ಬೆಳ್ತಂಗಡಿ ನ್ಯಾಯಾಲಯಕ್ಕೆ ಅ.9ರಂದು ಮಹಜರು ಹಾಗೂ ಘಟನಾ ವರದಿ ನೀಡಿ ಪ್ರಕರಣ ದಾಖಲಿಸಲು ಅನುಮತಿ ಪಡೆದು ವೇಣೂರು ಅರಣ್ಯ ಇಲಾಖೆಯಲ್ಲಿ ಆರೋಪಿ ಬೆನ್ನಿ ಪ್ರಸಾದ್ ವಿರುದ್ಧ ಪ್ರಕರಣ ದಾಖಲಾಯಿಸಿ ತನಿಖೆ ಮುಂದುವರಿಸಲಿದ್ದಾರೆ.

- Advertisement -

Latest News

error: Content is protected !!