Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಅಕ್ರಮವಾಗಿ ಗೋ ಸಾಗಾಟ:ಕೊಟ್ಟಿಗೆಹಾರದ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ಅಕ್ರಮವಾಗಿ ಗೋ ಸಾಗಾಟ:ಕೊಟ್ಟಿಗೆಹಾರದ ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಬೆಳ್ತಂಗಡಿ : ಚಿಕ್ಕಮಗಳೂರಿನ ಕೊಟ್ಟಿಗೆರೆಯಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವುವನ್ನು ಆ.18 ರಂದು ರಾತ್ರಿ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಗುರುವಾಯನಕೆರೆ ಹಾಗೂ ವಿಟ್ಲ ತಾಲೂಕಿನ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ರಕ್ಷಣೆ ಮಾಡಲಾಗಿದೆ.

ಕರ್ನಾಟಕದ ಬೇರೆ ಬೇರೆ ಪ್ರದೇಶದಿಂದ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವ ಒಂದು ಮಾಫಿಯಾ ಸಾಲೆತ್ತೂರಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹಿಂದೂ ಕಾರ್ಯಕರ್ತರು ತಿಳಿಸಿದ್ದಾರೆ . ಕೇರಳದ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುವುದು ನಿತ್ಯ ನಿರಂತರವಾಗಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದರು.

ಅಕ್ರಮ ಗೋ ಸಾಗಾಟದಲ್ಲಿ ವಶಕ್ಕೆ ಪಡೆದಿರುವ ವಾಹನದ ನೋಂದಣಿ ಸಂಖ್ಯೆ KA-16- D-6960 ಹಾಗೂ ಆರೋಪಿಗಳಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ  ಬಿನ್ನಾಡಿ ಗ್ರಾಮದ ಅಶ್ವಥ್ ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಬಿನ್ನಾಡಿ ಗ್ರಾಮದ ಸಚಿನ್ ಬಂಧಿತ ಆರೋಪಿಗಳಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!