Thursday, June 4, 2026
Homeಕರಾವಳಿಉಡುಪಿಬೈಂದೂರು: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಟ, ಓರ್ವನ ಬಂಧನ, ಮತ್ತೊಬ್ಬ ಪರಾರಿ

ಬೈಂದೂರು: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಟ, ಓರ್ವನ ಬಂಧನ, ಮತ್ತೊಬ್ಬ ಪರಾರಿ

- Advertisement -
- Advertisement -

ಬೈಂದೂರು: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಠಾಣೆಯ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ.

ಇಲ್ಲಿಗೆ ಸಮೀಪದ ನಾವುಂದ ಗ್ರಾಮದ ಅರೆಹೊಳೆಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಯುತ್ತಿದ್ದುದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಆರೋಪಿ ರವೀಂದ್ರ ಪೂಜಾರಿಯವರು ಮಹೀಂದ್ರಾ ಮ್ಯಾಕ್ಸಿಮೋ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದರು. ಬೆಳಗ್ಗೆ ಹಲಗೇರಿ ಗ್ರಾಮದಿಂದ ಎರಡು ಹಾಗೂ ಮುಳ್ಳಿಕಟ್ಟೆ ಗ್ರಾಮದಿಂದ ಇನ್ನೆರಡು ಹಸುಗಳನ್ನು ಸಾಗಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ನಾವುಂದ ಜಲೀಲ್ ಅವರ ಸೂಚನೆ ಮೇರೆಗೆ ಈ ಕೃತ್ಯ ಎಸಗಿರುವುದಾಗಿಯೂ ಅವರು ಬಹಿರಂಗಪಡಿಸಿದ್ದಾರೆ.

ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಕ್ರಮ ಸಾಗಾಟದ ಬಗ್ಗೆ ಸುಧಾಕರ ಶೆಟ್ಟಿ ನೆಲ್ಯಾಡಿ, ವೇದನಾಥ ಶೆಟ್ಟಿ, ದಿನೇಶ್ ಪೂಜಾರಿ ಮೊದಲಾದವರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!