Friday, May 3, 2024
Homeಕರಾವಳಿಬೆಳ್ತಂಗಡಿ: ಕುದುರೆಮುಖ ವನ್ಯಜೀವಿ ಅರಣ್ಯದಲ್ಲಿ ಅಕ್ರಮ ಮರ ಪತ್ತೆ ಹಚ್ಚಿದ ಪುತ್ತೂರಿನ ವಿಶೇಷ ಪೊಲೀಸ್ ಅರಣ್ಯ...

ಬೆಳ್ತಂಗಡಿ: ಕುದುರೆಮುಖ ವನ್ಯಜೀವಿ ಅರಣ್ಯದಲ್ಲಿ ಅಕ್ರಮ ಮರ ಪತ್ತೆ ಹಚ್ಚಿದ ಪುತ್ತೂರಿನ ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳ

spot_img
- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಕಡಿರುದ್ಯವರದ ವಳಂಬ್ರ ಕುದುರೆಮುಖ ವನ್ಯಜೀವಿ ವಲಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರ ಕಡಿದು ಸಾಗಿಸುತ್ತಿದ್ದ ಪ್ರಕರಣವೊಂದನ್ನು ಬೆಂಗಳೂರು ಸಿಐಡಿ ಅರಣ್ಯ ಘಟಕದ ಪುತ್ತೂರಿನ ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳದ ತಂಡ ಭೇದಿಸುವಲ್ಲಿ ಯಶಸ್ವಿಯಾಗಿದೆ.

ಮರ ಕಳ್ಳ ಸಾಗಣೆಯ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ, ವಾಹನ ಹೋಗಲು ಯಾವುದೇ ಮಾರ್ಗವಿಲ್ಲದ ಕಾರಣ 4 ಕಿ.ಮೀ ಅರಣ್ಯ ಪ್ರದೇಶದಲ್ಲಿ ನಡೆದುಕೊಂಡು ಹೋಗಿ ಪೋಲೀಸರ ತಂಡ ದಾಳಿ ನಡೆಸಿದೆ.

ದಾಳಿಯ ವೇಳೆ ಸುಮಾರು 1 ಲಕ್ಷದ 50ಸಾವಿರ ಮೌಲ್ಯದ 50.833 CFT ಉದ್ದದ ಬೇಂಗ ಜಾತಿಯ ಮರದ ದಿಮ್ಮಿ, ಹಲಗೆ, ಸೈಜು ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಈ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ತನಿಖೆಗೆ ಬೆಳ್ತಂಗಡಿ ವನ್ಯಜೀವಿ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.

ಬೆಂಗಳೂರು ಸಿಐಡಿ ಅರಣ್ಯ ಘಟಕದ ಪುತ್ತೂರು ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ಜಯ.ಕೆ, ಸುಂದರ್ ಶೆಟ್ಟಿ, ವಿಜಯ, ಉದಯ, ರಾಧಕೃಷ್ಣ. ಜಿ.ಬಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು‌.

- Advertisement -
spot_img

Latest News

error: Content is protected !!