Thursday, June 4, 2026
Homeಕರಾವಳಿಬೆಳ್ತಂಗಡಿ:  ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಲಾರಿ ಮತ್ತು ಮರ ವಶಕ್ಕೆ ಪಡೆದ ಅಧಿಕಾರಿಗಳು

ಬೆಳ್ತಂಗಡಿ:  ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಲಾರಿ ಮತ್ತು ಮರ ವಶಕ್ಕೆ ಪಡೆದ ಅಧಿಕಾರಿಗಳು

- Advertisement -
- Advertisement -

ಬೆಳ್ತಂಗಡಿ : ತಾಲೂಕಿನ ಉಪ್ಪಿನಂಗಡಿ ಕಾಣಿಯೂರು ಎಂಬಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಆಟೋ ಚಾಲಕರು ತಡೆಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ ನಡೆದಿದೆ.

ಬೆಳಾಲು ಕಡೆಯಿಂದ ಉಪ್ಪಿನಂಗಡಿ ಮಾರ್ಗವಾಗಿ ಚಲಿಸುತ್ತಿದ್ದ ಲಾರಿ ಚಾಲಕ ಕಣಿಯೂರು ಎಂಬಲ್ಲಿ ರಿಕ್ಷಾ ಚಾಲಕರಿಗೆ ಮಾರ್ಗ ಬಿಡದೆ ರಿಕ್ಷಾ ಚಾಲಕರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾನೆ. ಈ ವೇಳೆ ಅನುಮಾನ ಬಂದ ಕಾರಣ ಸ್ಥಳೀಯರು ಲಾರಿ ತಡೆ ಹಿಡಿದಿದ್ದಾರೆ.

ಬಳಿಕ ಅರಣ್ಯಾಧಿಕಾರಿಗಳ‌ ಗಮನಕ್ಕೆ ತಂದಿದ್ದಾರೆ. ಇನ್ನು ತನ್ನಲ್ಲಿ ಯಾವುದೇ ಪರವಾನಿಗೆ ಇಲ್ಲ  ಎಂದು ಲಾರಿ ಚಾಲಕ ವಿಚಾರಣೆ ವೇಳೆ ಹೇಳಿದ್ದಾನೆ. ಬಂಧಿತನಿಂದ ಸರಿಸುಮಾರು ಏಳು ಲಕ್ಷ ಮೌಲ್ಯದ ಮರ ವಶಪಡಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!