Friday, June 5, 2026
Homeಅಪರಾಧಚಿಕ್ಕಮಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಗಾಂಜಾ ಸಾಗಿಸುತ್ತಿದ್ದ ವಾಹನದ ಮೇಲೆ ಸೆನ್ ಪೊಲೀಸರ ದಾಳಿ!

ಚಿಕ್ಕಮಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಗಾಂಜಾ ಸಾಗಿಸುತ್ತಿದ್ದ ವಾಹನದ ಮೇಲೆ ಸೆನ್ ಪೊಲೀಸರ ದಾಳಿ!

- Advertisement -
- Advertisement -

ಚಿಕ್ಕಮಗಳೂರು: ತರಕಾರಿ ಗಾಡಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಬೃಹತ್ ಜಾಲವೊಂದನ್ನು ಚಿಕ್ಕಮಗಳೂರಿನ ಸೆನ್ ಪೊಲೀಸರು ತಾಲೂಕಿನ ಕರ್ತಿಕೆರೆ ಬಳಿ ಬಂಧಿಸಿದ್ದಾರೆ.

ಮೂವರು ಆರೋಪಿಗಳು ಸೇರಿ 102 ಕೆಜಿ ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ಖರೀದಿಯನ್ನು ಮಾಡಲಾಗಿದೆ ಎಂದು ಎಂದು ಹೇಳಲಾಗುತ್ತಿದೆ. ಕಾಲೇಜು ಹುಡುಗರು, ಕೂಲಿ ಕಾರ್ಮಿಕರನ್ನ ಗುರಿಯಾಗಿಸಿ ಗಾಂಜಾ ಮಾರಾಟ ಮಾಡುತ್ತಿದ್ದ ತಂಡ ಚಿಕ್ಕಮಗಳೂರು ಸೇರಿ ಮಂಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳಿಗೆ ಸಪ್ಲೈ ಮಾಡುತ್ತಿತ್ತು ಎಂದು ತಿಳಿದುಬಂದಿದೆ.

ಸೆನ್ ಇನ್ಸ್ಪೆಕ್ಟರ್ ರಕ್ಷಿತ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಇದೆ ಮೊದಲ ಬಾರಿಗೆ ದೊಡ್ಡಮಟ್ಟದ ಕಾರ್ಯಾಚರಣೆ ನಡೆಸಿದ ಸೆನ್ ಪೊಲೀಸರನ್ನು ಎಸ್ಪಿ ಅಕ್ಷಯ್ ಶ್ಲಾಘಿಸಿದ್ದಾರೆ.

- Advertisement -

Latest News

error: Content is protected !!