- Advertisement -
![]()
- Advertisement -
ವಿಟ್ಲ: ಬೋಳಂತೂರು ಸಮೀಪದ ನಾರ್ಶದಿಂದ ಲಾರಿಯಲ್ಲಿ 15 ಟನ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪೋಲಿಸರ ತಂಡವು ಆರೋಪಿ ಸಹಿತ 313 ಗೋಣಿಗಳ 15 ಟನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನೂ ಪೊಲೀಸರು ಪ್ರಕರಣದಲ್ಲಿ ಸಿಕ್ಕಿ ಬಿದ್ದ ಲಾರಿ ಚಾಲಕನನ್ನು ವಿಚಾರಿಸಿದಾಗ ಆರೋಪಿ ನ್ಯಾಯ ಬೆಲೆ ಅಂಗಡಿಯವರ ಬಗ್ಗೆ ಮಾಹಿತಿ ನೀಡಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ದಾಖಲಾದ ಪ್ರಕರಣದ ಆಧಾರದಲ್ಲಿ ಬಂಟ್ವಾಳ ತಾಲೂಕು ಬೊಳಂತೂರು ಗ್ರಾಮದ ಅಬೂಬಕರ್, ಮತ್ತು ಹಮೀದ್ ನಾರ್ಶ್ ರನ್ನು ನ್ಯಾಯಬೆಲೆ ಅಂಗಡಿ ಪ್ರಾಧಿಕಾರದಿಂದ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
- Advertisement -


