Friday, June 5, 2026
Homeಕರಾವಳಿಉಳ್ಳಾಲ: ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟ ಜಾಗದಲ್ಲಿ ಅಕ್ರಮ ಮನೆ ನಿರ್ಮಾಣ - ಬಿಲ್ಡರ್ ವಿರುದ್ಧ ಕೇಸ್...

ಉಳ್ಳಾಲ: ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟ ಜಾಗದಲ್ಲಿ ಅಕ್ರಮ ಮನೆ ನಿರ್ಮಾಣ – ಬಿಲ್ಡರ್ ವಿರುದ್ಧ ಕೇಸ್ ದಾಖಲು

- Advertisement -
- Advertisement -

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಡ್ಯಾರು ಸಾಯಿ ನಗರದಲ್ಲಿ ಉಳ್ಳಾಲ ಕಡಲ್ಕೊರೆತ ಸಂತ್ರಸ್ತರಿಗೆ 1.22 ಎಕರೆ ಜಮೀನನ್ನು ಮೀಸಲಿರಿಸಲಾಗಿತ್ತು. ಈ ಮೀಸಲಿಟ್ಟ ಜಮೀನಿನಲ್ಲಿ ಬಿಲ್ಡರ್ ಶರತ್ ರಾಜ್ ಎಂಬುವವರು ಅಕ್ರಮವಾಗಿ ಮನೆಗಳನ್ನು ನಿರ್ಮಾಣ ಮಾಡುತ್ತಿರುವುದರ ಬಗ್ಗೆ ಆರೋಪ ಕೇಳಿಬಂದಿತ್ತು.

ಈ ಬಗ್ಗೆ ಉಳ್ಳಾಲ ನಗರಸಭೆ ಆಯುಕ್ತರಾದ ರಾಯಪ್ಪ ಸ್ಥಳಕ್ಕೆ ತೆರಳಿ ಸೂಚನೆ ನೀಡಿದರೂ, ಜಾಗ ತೆರವುಗೊಳಿಸದ ಕಾರಣ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.

ಉಳ್ಳಾಲ ಪೊಲೀಸರು ಶರತ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಅನಧಿಕೃತ ಮನೆಗಳನ್ನು ತೆರವುಗೊಳಿಸಲು ಪೊಲೀಸರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಸ್ಥಳೀಯ ಕೋಟೆಕಾರು ಪಟ್ಟಣ ಪಂಚಾಯತ್ ಮತ್ತು ಉಳ್ಳಾಲ ನಗರಸಭಾ ಅಧಿಕಾರಿಗಳು ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪವೂ ಇದೆ.

- Advertisement -

Latest News

error: Content is protected !!