Sunday, June 7, 2026
Homeಕರಾವಳಿಉಡುಪಿವಾಯುಭಾರ ಕುಸಿತದ ಪರಿಣಾಮ- ಕರಾವಳಿಯಲ್ಲಿ ಭಾರೀ ಮಳೆ!

ವಾಯುಭಾರ ಕುಸಿತದ ಪರಿಣಾಮ- ಕರಾವಳಿಯಲ್ಲಿ ಭಾರೀ ಮಳೆ!

- Advertisement -
- Advertisement -

ಮಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಉಡುಪಿ, ಕಾರ್ಕಳ, ಕಾಪು, ಮಂಗಳೂರು ಭಾಗದಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ. ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದ ಕರ್ನಾಟಕ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಹಲವೆಡೆ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ.ಇದಲ್ಲದೆ ಉತ್ತರ ಒಳನಾಡು, ದಕ್ಷಿಣ ಒಳನಾಡುಗಳಲ್ಲಿಯೂ ಭಾರೀ ಮಳೆ ಮುಂದುವರಿದಿದೆ. ಕೆಲವೆಡೆ ಎಲ್ಲೋ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ

- Advertisement -

Latest News

error: Content is protected !!