Tuesday, April 30, 2024
Homeತಾಜಾ ಸುದ್ದಿಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ನೈತಿಕ ಶಿಕ್ಷಣ ಜಾರಿ – ಬಿ.ಸಿ.ನಾಗೇಶ್‌

ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ನೈತಿಕ ಶಿಕ್ಷಣ ಜಾರಿ – ಬಿ.ಸಿ.ನಾಗೇಶ್‌

spot_img
- Advertisement -
- Advertisement -

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಹಂತದಲ್ಲಿ ನೈತಿಕ ಶಿಕ್ಷಣ ಜಾರಿ ಮಾಡೋದಾಗಿ ಸರ್ಕಾರ ನಿರ್ಧರಿಸಿದೆ. ಧರ್ಮಗುರುಗಳ ನೇತೃತ್ವದಲ್ಲಿ ಸೋಮವಾರ ಮಹತ್ವದ ಸಭೆ ನಡೆದಿದ್ದು, ಧರ್ಮಾತೀತವಾಗಿ ಎಲ್ಲಾ ಗುರುಗಳು ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಜಾರಿಯಾಗಬೇಕು ಎಂದು ಸಲಹೆ ನೀಡಿದ್ದಾರೆ.

ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಅಳವಡಿಸುವ ಸರ್ಕಾರದ ನಿರ್ಧಾರಕ್ಕೆ ಧರ್ಮಾತೀತವಾಗಿ ಧರ್ಮಗುರುಗಳು ಸಹಮತ ವ್ಯಕ್ತಪಡಿಸಿದರು. ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಮಠಾಧೀಶರು, ಧರ್ಮಗುರುಗಳು, ಶಿಕ್ಷಣ ತಜ್ಞರ ದುಂಡು ಮೇಜಿನ ಸಭೆಯಲ್ಲಿ ಶಾಲಾ ಹಂತದಲ್ಲಿ ಕಡ್ಡಾಯವಾಗಿ ನೈತಿಕ ಶಿಕ್ಷಣ ಅವಶ್ಯಕತೆ ಇದೆ ಎಂದು ಧರ್ಮ ಗುರುಗಳು ಸಲಹೆ ನೀಡಿದ್ದಾರೆ.

- Advertisement -
spot_img

Latest News

error: Content is protected !!