Friday, April 19, 2024
HomeಇತರSSLC-PUC' ಪರೀಕ್ಷೆ : ಶಿಕ್ಷಣ ಸಚಿವರಿಂದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

SSLC-PUC’ ಪರೀಕ್ಷೆ : ಶಿಕ್ಷಣ ಸಚಿವರಿಂದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

spot_img
- Advertisement -
- Advertisement -

ಬೆಂಗಳೂರು : ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ನಿರ್ಧಾರ ಕೈಗೊಂಡಿದ್ದು, ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಬಗ್ಗೆ ಮೇ. 3 ರ ಬಳಿಕವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸುರೇಶ್ ಕುಮಾರ್, ರಾಜ್ಯದಲ್ಲಿ ಮೇ. 3 ರವರೆಗೆ ಲಾಕ್ ಡೌನ್ ಮುಂದುವರೆಯಲಿದ್ದು, ದ್ವಿತೀಯ ಪಿಯುಸಿಗೆ ಬಾಕಿಯಿರುವ ಒಂದು ಭಾಷೆಯ ಪರೀಕ್ಷೆ ಹಾಗೂ ಎಸ್‌ಎಸ್‌ಎಲ್ ಪರೀಕ್ಷೆಯ ಬಗ್ಗೆ ನಿರ್ಧಾರಗಳನ್ನು ಮೇ. 3 ವರೆಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಏಪ್ರಿಲ್ 14 ರ ಬಳಿಕ ಎಸ್‌ಎಸ್‌ಎಲ್ ಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುವುದಾಗಿ ಸುರೇಶ್ ಕುಮಾರ್ ಹೇಳಿದ್ದರು. ಆದರೆ ದೇಶಾದ್ಯಂತ ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದರಿಂದ ಮೇ. 3 ರ ಬಳಿಕ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!