- Advertisement -
- Advertisement -
ದುಬೈನಿಂದ ಭಾರತಕ್ಕೆ ಮರಳಲು ಬಯಸುವ ಜನರಿಗಾಗಿ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾಆನ್‌ಲೈನ್ ನೋಂದಣಿ ಆರಂಭಿಸಿದ್ದು, ಜನರು ನೊಂದಣಿ ಮಾಡಿಕೊಳ್ಳಲು ಕೋರಿದೆ.
ಅಬುಧಾಬಿಯ ಭಾರತೀಯ ದೂತವಾಸ ಕಚೇರಿ, ದುಬೈನಲ್ಲಿರುವ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ಮಾಹಿತಿಗಳನ್ನು ಸಂಗ್ರಹ ಮಾಡಲು ಆನ್ ಲೈನ್ ನೋಂದಣಿ ಆರಂಭಿಸಿದೆ.
ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ಬಗ್ಗೆ ಮೇ 3 ರ ಬಳಿಕ ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಸಂಯುಕ್ತ ಅರಬ್ ಸಂಸ್ಥಾನದಲ್ಲಿ ಅಂದಾಜು 34.2 ಲಕ್ಷ ಭಾರತೀಯರು ಇದ್ದಾರೆ ಎಂದು ಹೇಳಲಾಗಿದೆ. ವಿಶ್ವದಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಹಲವರು ದುಬೈನಲ್ಲಿ ಸಿಲುಕಿದ್ದು, ಭಾರತಕ್ಕೆ ಮರಳಲು ಸಾಧ್ಯವಾಗದೇ ಅಲ್ಲೇ ಸಿಲುಕಿದ್ದಾರೆ.
- Advertisement -