Monday, June 8, 2026

 

- Advertisement -
- Advertisement -

 

ಕಡಬದಲ್ಲಿ ಮಸೀದಿ ಕಾಪೌಂಡ್ ನೊಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಯುವಕರು; ಪ್ರಕರಣ ದಾಖಲು

ಕಡಬ; ಯುವಕರಿಬ್ಬರು ಮಸೀದಿ ಕಾಪೌಂಡ್ ನೊಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಘಟನೆ ಕಡಬ ತಾಲೂಕಿನ ಮರ್ದಾಳದ ಬದ್ರಿಯಾ ಜುಮಾ ಮಸೀದಿಯಲ್ಲಿ ನಡೆದಿದೆ.

ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಬೈಕಿನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಮಸೀದಿಯ ವರಾಂಡದಲ್ಲಿ ಬೈಕ್ ತಿರುಗಿಸಿ ತೆರಳಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೈಶ್ರೀರಾಂ ಘೋಷಣೆ ಕೂಗಿದ ಯುವಕರು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ಕಂಡು ತಕ್ಷಣವೇ ಹಿಂತಿರುಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿ‌ನಲ್ಲಿ ತಿಳಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಡಬ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್ ಹಾಗೂ ಉಪ್ಪಿನಂಗಡಿ ಠಾಣಾ ಸಬ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿಗ ಪರಿಸರದ ವಿವಿಧ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದು, ಎರಡು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ

- Advertisement -

Latest News

error: Content is protected !!