Monday, June 8, 2026
Homeತಾಜಾ ಸುದ್ದಿರಾಷ್ಟ್ರಧ್ವಜ ಹಾರಾಟವು ರಾಜ್ಯದ ಎಲ್ಲಾ ಮದರಸಾಗಳಲ್ಲೂ ಕಡ್ಡಾಯ – ರಾಜ್ಯ ಸರ್ಕಾರದಿಂದ ಅಧಿಸೂಚನೆ ಪ್ರಕಟ

ರಾಷ್ಟ್ರಧ್ವಜ ಹಾರಾಟವು ರಾಜ್ಯದ ಎಲ್ಲಾ ಮದರಸಾಗಳಲ್ಲೂ ಕಡ್ಡಾಯ – ರಾಜ್ಯ ಸರ್ಕಾರದಿಂದ ಅಧಿಸೂಚನೆ ಪ್ರಕಟ

- Advertisement -
- Advertisement -

75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗಾ’ ಅಭಿಯಾನ ನಡೆಸಲು ಘೋಷಿಸಿದೆ. ಇದರ ಬೆನ್ನಲ್ಲೇ ರಾಜ್ಯದ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳು, ವಿವಿಗಳಲ್ಲಿ ಕಡ್ಡಾಯವಾಗಿ ತಿರಂಗ ಹಾರಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.

ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಕೂಡ ಈ ಮಹತ್ವದ ಆದೇಶ ಹೊರಡಿಸಲು ಮುಂದಾಗಿದ್ದು, ಆಗಸ್ಟ್ 11 ರಿಂದ 17ರ ವರೆಗೆ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯುಸಿ ಕಾಲೇಜುಗಳು, ಮದರಸಾಗಳ ಮೇಲೂ ಕಡ್ಡಾಯವಾಗಿ ತಿರಂಗಾ ಹಾರಿಸಲೇಬೇಕು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ.

ಇನ್ನು ಈ ಆದೇಶವನ್ನು ಕಟ್ಟುನಿಟ್ಟಾಗಿ ಸರ್ಕಾರಿ, ಅನುದಾನಿತ, ಅನದಾನ ರಹಿತ ಶಾಲಾ-ಕಾಲೇಜುಗಳು, ಎಲ್ಲಾ ಮದರಸಾಗಳು ಪಾಲಿಸಬೇಕು. ತ್ರಿವರ್ಣ ಧ್ವಜದ ಜೊತೆಗೆ ಶಾಲೆ, ಕಾಲೇಜು, ಮದರಸಾಗಳಲ್ಲಿ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ ಮೆಲುಕು ಹಾಕುವ ಗೀತ ಗಾಯನ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂದು ತಿಳಿಸಿದ್ದಾರೆ.

ಕ್ವಿಜ್, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟಗಾರರು, ಸ್ವಾತಂತ್ರ್ಯ ಹೋರಾಟದ ಬಗ್ಗೆ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜನೆ ಮಾಡಬೇಕು ಎಂದು ಸೂಚಿಸುವಂತೆ ಹೇಳಿದ್ದಾರೆ. ಮುಖ್ಯವಾಗಿ ಶಾಲಾ-ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ಸೂಚನೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!