Thursday, May 16, 2024
Homeತಾಜಾ ಸುದ್ದಿಮಹಾ ಪ್ರವಾಹಕ್ಕೆ ಮಹಾರಾಷ್ಟ್ರ ತತ್ತರ :2 ದಿನದಲ್ಲಿ 136 ಸಾವು!!

ಮಹಾ ಪ್ರವಾಹಕ್ಕೆ ಮಹಾರಾಷ್ಟ್ರ ತತ್ತರ :2 ದಿನದಲ್ಲಿ 136 ಸಾವು!!

spot_img
- Advertisement -
- Advertisement -

ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಮಳೆ ತನ್ನ ರೌದ್ರನರ್ತನ ತೋರಿಸುತ್ತಿದ್ದು, ಕಳೆದ 2 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ 136 ಜನರನ್ನು ಬಲಿ ಪಡೆದಿದೆ.

ಸತಾರಾ ಜಿಲ್ಲೆಯ ಮೋರಿಗಾಂವ್‌ ಎಂಬಲ್ಲಿ ಮಣ್ಣು ಕುಸಿದು 6 ಜನ ಸಾವನ್ನಪ್ಪಿದ್ದಾರೆ. ಮುಂಬೈನಲ್ಲಿ ಮನೆ ಬಿದ್ದು 4 ಜನ ಸಾವನ್ನಪ್ಪಿದ್ದಾರೆ.ಇನ್ನು ರಾಯಗಢ ಜಿಲ್ಲೆಯ ತಲಾಯಿ ಗ್ರಾಮದಲ್ಲಿ ಗುಡ್ಡವೊಂದು ಕುಸಿದ ಪರಿಣಾಮ ಕೆಳಭಾಗದಲ್ಲಿದ್ದ 24 ಮನೆಗಳು ಮಣ್ಣಿನಲ್ಲಿ ಹೂತು ಹೋಗಿದ್ದು, 38 ಜನ ಜೀವಂತ ಸಮಾಧಿಯಾಗಿದ್ದಾರೆ. ರತ್ನಗಿರಿ ಜಿಲ್ಲೆಯಲ್ಲಿ 10, ಸತಾರಾದಲ್ಲಿ ಮೂವರು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಶುಕ್ರವಾರದ ಸಾವೂ ಸೇರಿದಂತೆ ಕಳೆದ 48 ಗಂಟೆಗಳ ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸಂಬಂಧಿ ಘಟನೆಗಳಿಗೆ ಒಟ್ಟು 136 ಜನ ಬಲಿಯಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಮಾಹಿತಿ ನೀಡಿದೆ.

ಮಹಾರಾಷ್ಟ್ರದಲ್ಲಿ ಮಳೆ ಸಂಬಂಧಿ ಘಟನೆಗಳಿಗೆ ಬಲಿಯಾದವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಸಿಎಂ ಉದ್ಧವ್‌ ಠಾಕ್ರೆ ಘೋಷಿಸಿದ್ದು, ಇನ್ನೊಂದೆಡೆ, ಪ್ರಧಾನಿ ಮೋದಿ ರಾಯಗಡ ಭೂಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ರಾಜ್ಯದಲ್ಲಿ ಈವರೆಗಿನ ಅತಿದೊಡ್ಡ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, ಸೇನೆ, ನೌಕಾಪಡೆ, ವಾಯುಪಡೆ, ಕರಾವಳಿ ಪಡೆ, ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆ ಹಾಗೂ ಮಹಾರಾಷ್ಟ್ರ ಸರ್ಕಾರದ ವಿವಿಧ ವಿಭಾಗಗಳ ಸಿಬ್ಬಂದಿ, ಕಾರ್ಯಾಚರಣೆಗೆ ಇಳಿದಿದ್ದಾರೆ.

- Advertisement -
spot_img

Latest News

error: Content is protected !!