Monday, May 13, 2024
Homeತಾಜಾ ಸುದ್ದಿಮಂಗಳೂರಿನಲ್ಲಿ ಸೆ. 2ರಂದು 3,800 ಕೋಟಿ ರೂ.ಯೋಜನೆಗಳಿಗೆ ಮೋದಿ ಚಾಲನೆ

ಮಂಗಳೂರಿನಲ್ಲಿ ಸೆ. 2ರಂದು 3,800 ಕೋಟಿ ರೂ.ಯೋಜನೆಗಳಿಗೆ ಮೋದಿ ಚಾಲನೆ

spot_img
- Advertisement -
- Advertisement -

ಸೆ. 2ರಂದು ಮಧ್ಯಾಹ್ನ 1.30ಕ್ಕೆ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.

ಮಂಗಳೂರಿನಲ್ಲಿ ಸುಮಾರು 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನವಮಂಗಳೂರು ಬಂದರು ಪ್ರಾಧಿಕಾರವು ಕೈಗೆತ್ತಿಕೊಂಡಿರುವ ಕಂಟೈನರ್‌ಗಳು ಮತ್ತು ಇತರ ಸರಕುಗಳನ್ನು ನಿರ್ವಹಿಸಲು ಬರ್ತ್ ನಂ. 14ರ ಯಾಂತ್ರೀಕರಣಕ್ಕಾಗಿ 280 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ಬಂದರು ಕೈಗೆತ್ತಿಕೊಂಡಿರುವ ಸುಮಾರು 1000 ಕೋಟಿ ರೂ.ಗಳ 5 ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸೌಲಭ್ಯವು ಈ ಪ್ರದೇಶದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಉತ್ತೇಜನ ನೀಡುವುದರ ಜೊತೆಗೆ ದೇಶದ ಅಗ್ರ LPG ಆಮದು ಮಾಡಿಕೊಳ್ಳುವ ಬಂದರುಗಳಲ್ಲಿ ಒಂದಾಗಿ ಬಂದರಿನ ಸ್ಥಾನಮಾನವನ್ನು ಬಲಪಡಿಸುತ್ತದೆ.

- Advertisement -
spot_img

Latest News

error: Content is protected !!