Saturday, April 20, 2024
Homeತಾಜಾ ಸುದ್ದಿಮೇ ತಿಂಗಳಲ್ಲಿ ಕರ್ನಾಟಕಕ್ಕೆ ಕಾದಿದೆ ಕೊರೊನಾ ಗಂಡಾಂತರ

ಮೇ ತಿಂಗಳಲ್ಲಿ ಕರ್ನಾಟಕಕ್ಕೆ ಕಾದಿದೆ ಕೊರೊನಾ ಗಂಡಾಂತರ

spot_img
- Advertisement -
- Advertisement -

ಬೆಂಗಳೂರು: ಮೇ ತಿಂಗಳ ಮೊದಲ ವಾರದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಲಿದೆ. ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕೋವಿಡ್ ನಿಯಂತ್ರಣ ಸಂಬಂಧ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೇ ತಿಂಗಳ ಕೊನೆವರೆಗೂ ಎಚ್ಚರಿಕೆಯಿಂದಿರಬೇಕು. ಮೇ ಮೊದಲ ವಾರದಲ್ಲಿ ಕೊರೊನಾ ಗರಿಷ್ಠ ಮಟ್ಟ (ಪೀಕ್) ತಲುಪಬಹುದು. ಮೇ ಅಂತ್ಯಕ್ಕೆ ಸ್ವಲ್ಪ ಕಡಿಮೆಯಾಗಬಹುದು. ಹೆಚ್ಚು ಪ್ರಕರಣ ಕಂಡುಬಂದರೆ ಅದಕ್ಕೆ ತಕ್ಕಂತೆ ಆಸ್ಪತ್ರೆ ಹಾಸಿಗೆ ಬೇಡಿಕೆ ಹೆಚ್ಚಾಗುತ್ತದೆ.

ಇದಕ್ಕಾಗಿ ಖಾಸಗಿ ಆಸ್ಪತ್ರೆಗಳ ಸಹಕಾರ ಪಡೆಯಬೇಕು. ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಪ್ರಯಾಣಿಕರನ್ನು ಪರೀಕ್ಷಿಸುವ ಹಾಗೂ ಪರೀಕ್ಷಾ ವರದಿ ಪರಿಶೀಲಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ಇವೆಲ್ಲವನ್ನೂ ವರದಿ ರೂಪದಲ್ಲಿ ನೀಡಲು ಸೂಚಿಸಲಾಗಿದೆ. ವರದಿಯನ್ನು ಮುಖ್ಯಮಂತ್ರಿಗಳಿಗೆ ನೀಡಿ ಸಮರ್ಪಕವಾಗಿ ಚರ್ಚಿಸಲಾಗುವುದು. ಇದನ್ನು ಪರಿಗಣಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

ಖಾಸಗಿ ಆಸ್ಪತ್ರೆಗಳು ಕೂಡ ಸರ್ಕಾರೊಂದಿಗೆ ಕೆಲಸ ಮಾಡಿವೆ. ಟೆಲಿ ಐಸಿಯು ವ್ಯವಸ್ಥೆ ಮೊದಲಿಗೆ ನಮ್ಮ ಸರ್ಕಾರ ಆರಂಭಿಸಿದ್ದು, ಖಾಸಗಿ ಆಸ್ಪತ್ರೆಗಳು ಉಚಿತವಾಗಿ ಈ ಸೇವೆ ನೀಡಿವೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸಬೇಕಿದೆ. ಆರ್ಥಿಕ ಚಟುವಟಿಕೆಗೆ ತೊಂದರೆಯಾಗುವ ಯಾವುದೇ ಸಲಹೆ ನೀಡುವುದಿಲ್ಲ, ಆದರೆ ಗುಂಪುಗೂಡದಂತೆ ಕ್ರಮ ವಹಿಸಬೇಕೆಂದು ತಜ್ಞರು ಹೇಳಿದ್ದಾರೆ

- Advertisement -
spot_img

Latest News

error: Content is protected !!