Wednesday, June 26, 2024
Homeರಾಜಕೀಯ'ಪಂಚರಾಜ್ಯ ಚುನಾವಣೆಯಲ್ಲಿ ಮತದಾರರು ಸೈಲೆಂಟ್‌ ಆಗಿ ಉತ್ತರ ಕೊಟ್ಟಿದ್ದಾರೆ'- ಸಂಸದ ತೇಜಸ್ವಿ ಸೂರ್ಯ

‘ಪಂಚರಾಜ್ಯ ಚುನಾವಣೆಯಲ್ಲಿ ಮತದಾರರು ಸೈಲೆಂಟ್‌ ಆಗಿ ಉತ್ತರ ಕೊಟ್ಟಿದ್ದಾರೆ’- ಸಂಸದ ತೇಜಸ್ವಿ ಸೂರ್ಯ

spot_img
- Advertisement -
- Advertisement -

ಬೆಂಗಳೂರು: ಪಂಚರಾಜ್ಯ ಚುನಾವಣೆಯಲ್ಲಿ ಸೈಲೆಂಟ್ ಆಗಿಯೇ ಬಿಜೆಪಿ ಮತದಾರರು ಮತದಾನ ಮಾಡುವ ಮೂಲಕ ದೊಡ್ಡ ಸಂದೇಶ ನೀಡಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಪಂಚರಾಜ್ಯ ಚುನಾವಣೆಯಲ್ಲಿ ಗೆಲುವು ಸಾಧಿಸಿದವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ಅವರು, ಸೈಲೆಂಟ್ ಆಗಿಯೇ ಬಿಜೆಪಿ ಮತದಾರರು ಮತದಾನ ಮಾಡುವ ಮೂಲಕ ದೊಡ್ಡ ಸಂದೇಶ ನೀಡಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ನಂಬಿಕೆ ನನಗೆ ಈ ಹಿಂದೆಯೇ ಇತ್ತು ಎಂದರು.

ಇನ್ನು ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ಮೋದಿ ಡಬಲ್ ಇಂಜಿನ್ ಸರ್ಕಾರ ನಡೆಸಿದ್ದು, ಇವರ ಯಶಸ್ವಿ ನಡೆಗೆ ಜನರೇ ಉತ್ತರ ನೀಡಿದ್ದಾರೆ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಈ ಹಿಂದೆ ಹೆಣ್ಣು ಮಕ್ಕಳು ಹೊರಗೆ ಬರಲು ಕೂಡಾ ಭಯ ಪಡುತ್ತಿದ್ದರು. ಆದರೆ ಈಗ ಎಲ್ಲ ಜಾತಿ ಮಹಿಳೆಯರಿಗೂ ಬಿಜೆಪಿ ಸರ್ಕಾರ ಬಂದ ಮೇಲೆ ಧೈರ್ಯ ಬಂದಿದೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!