Saturday, May 18, 2024
Homeತಾಜಾ ಸುದ್ದಿಹತ್ರಾಸ್ ಅತ್ಯಾಚಾರ ಪ್ರಕರಣ: SP, DCP, ಇನ್ಸ್ಪೆಕ್ಟರ್ ಹಾಗೂ ಇತರ ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿದ...

ಹತ್ರಾಸ್ ಅತ್ಯಾಚಾರ ಪ್ರಕರಣ: SP, DCP, ಇನ್ಸ್ಪೆಕ್ಟರ್ ಹಾಗೂ ಇತರ ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

spot_img
- Advertisement -
- Advertisement -

ಲಖನೌ: ಹತ್ರಾಸ್ ಅತ್ಯಾಚಾರ ಪ್ರಕರಣದ ಸಂಬಂಧ ನಡೆದ ಮಹತ್ವದ ಬೆಳವಣಿಗೆಯಲ್ಲಿ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಪೊಲೀಸ್ ವರಿಷ್ಠಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್‌ಪೆಕ್ಟರ್ ಮತ್ತಿತರೆ ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಎಸ್‌ಪಿ ಮತ್ತು ಡಿಎಸ್‌ಪಿಯ ನಾರ್ಕೊ ಪಾಲಿಗ್ರಾಫ್ ಪರೀಕ್ಷೆಗಳನ್ನು ಸಹ ನಡೆಸಲಾಗುವುದು ಎಂದು ಸಿಎಂಒ ತಿಳಿಸಿದೆ. ಈ ಮಧ್ಯೆ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಈ ಪ್ರಕರಣವನ್ನು ಸ್ವಯಂಪ್ರೇರಿತರವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಪೊಲೀಸರ ಅಮಾನವೀಯ ವರ್ತನೆ ಬಗ್ಗೆ ಸ್ಪಷ್ಟನೆ ಕೇಳಿ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಹತ್ರಾಸ್ ಜಿಲ್ಲಾಧಿಕಾರಿ, ಡಿಜಿಪಿ, ಎಡಿಜಿಪಿ ಮತ್ತು ಹತ್ರಾಸ್ ಎಸ್ಪಿ ಅವರಿಗೆ ನೋಟಿಸ್ ನೀಡಿದೆ. ಅಕ್ಟೋಬರ್ 12ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.

ಸೆಪ್ಟೆಂಬರ್ 14 ರಂದು ಹತ್ರಾಸ್ ನ ತನ್ನ ಹಳ್ಳಿಯಲ್ಲಿರುವ ಹೊಲದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆ ನಡೆದಿದೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.

- Advertisement -
spot_img

Latest News

error: Content is protected !!