Friday, May 17, 2024
Homeಕರಾವಳಿಬಂಟ್ವಾಳ:ಭಂಡಾರಿಬೆಟ್ಟುವಿನಲ್ಲಿ 'ಬಲೆ ತುಳು ಲಿಪಿ ಕಲ್ಪುಗ' ಕಾರ್ಯಗಾರ ಉದ್ಘಾಟನೆ !

ಬಂಟ್ವಾಳ:ಭಂಡಾರಿಬೆಟ್ಟುವಿನಲ್ಲಿ ‘ಬಲೆ ತುಳು ಲಿಪಿ ಕಲ್ಪುಗ’ ಕಾರ್ಯಗಾರ ಉದ್ಘಾಟನೆ !

spot_img
- Advertisement -
- Advertisement -

ಬಂಟ್ವಾಳ: ಬಂಟ್ವಾಳ ತಾಲೂಕಿನ ಯುವಜನ ವ್ಯಾಯಮಶಾಲೆ ಭಂಡಾರಿಬೆಟ್ಟುವಿನಲ್ಲಿ ಆಗಸ್ಟ್ 22ರ ಆದಿತ್ಯವಾರದಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ ಮತ್ತು ತುಳುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ಬಲೆ ತುಳು ಲಿಪಿ ಕಲ್ಪುಗ ಕಾರ್ಯಗಾರ ಉದ್ಘಾಟನಾ ಸಮಾರಂಭ ನಡೆಯಿತು.

ಜೈ ತುಲುನಾಡ್ (ರಿ.) ಅಧ್ಯಕ್ಷರಾದ ಸುದರ್ಶನ್ ಸುರತ್ಕಲ್ ರವರ ಅಧ್ಯಕ್ಷತೆಯಲ್ಲಿ ನಡೆದ ತುಳು ಲಿಪಿ ಕಲಿಯುವ ಕಾರ್ಯಗಾರವನ್ನು ಚೇತನ್ ಮುಂಡಾಜೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತುಳು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ ರವರು ತುಳು ಲಿಪಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.

ಇನ್ನು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಚೇತನ್ ಮುಂಡಾಜೆರವರು ತುಳು ಭಾಷೆಗೆ ಲಿಪಿ ಇದ್ದರೂ ಅದೆಷ್ಟೋ ಜನರಿಗೆ ತಿಳಿಯದೆ ಹೋಗಿದೆ, ತುಳು ಭಾಷೆಗೆ ಸುಮಾರು 2500 ವರ್ಷದ ಇತಿಹಾಸ ಇದೆ, ಇಂತಹ ಭಾಷೆಯನ್ನು ನಾವು ಕಲಿಯದೆ ಹಿಂದುಳಿಯುವಂತೆ ಮಾಡಿದ್ದೇವೆ. ಇನ್ನಾದರೂ ಈ ಭಾಷೆಯನ್ನು, ಲಿಪಿಯನ್ನು ಕಲಿತು ಮುಂದಿನ ಪೀಳಿಗೆಗೆ ಉಳಿಸುವ ಕಾರ್ಯ ಮಾಡುವ ಎಂದರು.

ಜೈ ತುಳುನಾಡ್ (ರಿ) ಸಂಘಟನೆಯ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಮಾತನಾಡಿ, ಸಂಘಟನೆ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುವ ಕಾಲದಿಂದ ಇಂದಿನ ತನಕವೂ ತುಳುವಿನ ಸ್ಥಾನಮಾನಕ್ಕಾಗಿ ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದೇವೆ. ಅಕಾಡೆಮಿಯೊಟ್ಟಿಗೆ ಸಂಘಟನೆಯು ಸಹಕಾರ ನೀಡುತ್ತಾ ಬರುತ್ತಿದೆ. ತುಳುನಾಡಿನ ಎಲ್ಲಾ ಅಂಗಡಿ, ಶಾಲೆ, ಕಚೇರಿಯಲ್ಲಿ ತುಳು ಲಿಪಿಯ ನಾಮಫಲಕ ಹಾಕಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸೀತಾರಾಮ ಸಜಿಪ, ಜೈ ತುಳುನಾಡ್ (ರಿ.) ಉಪಾಧ್ಯಕ್ಷರಾದ ಉದಯ್ ಪೂಂಜ, ಉಪ ಸಂಘಟನಾ ಕಾರ್ಯದರ್ಶಿ ಅಶ್ರಫ್ ಭಸ್ಥಿಕೋಡಿ, ತುಳು ಲಿಪಿ ಶಿಕ್ಷಕರಾದ ಪೂರ್ಣಿಮಾ ಬಂಟ್ವಾಳ ಹಾಗೂ ಪೃಥ್ವಿ ತುಳುವೆ ಉಪಸ್ಥಿತರಿದ್ದರು. ಧೀರಜ್ ಗಣ್ಯರನ್ನು ಸ್ವಾಗತಿಸಿ, ಮಹೇಶ್ ಎಲ್ಲರಿಗೂ ಧನ್ಯವಾದಗೈದರು. ಲಿಖಿತ್‌ರಾಜ್ ಸೆರ್ಕಳ ಕಾರ್ಯಕ್ರಮ ನಿರೂಪಿಸಿದರು.

- Advertisement -
spot_img

Latest News

error: Content is protected !!