Thursday, May 2, 2024
Homeಕರಾವಳಿಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಉಚಿತ ಕೋವಿಡ್ ಲಸಿಕಾ ಶಿಬಿರ ಉದ್ಘಾಟನೆ !!

ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಉಚಿತ ಕೋವಿಡ್ ಲಸಿಕಾ ಶಿಬಿರ ಉದ್ಘಾಟನೆ !!

spot_img
- Advertisement -
- Advertisement -

ಬಂಟ್ವಾಳ: ಮಾಣಿ ಗ್ರಾ.ಪಂ.ಅಪೋಲೋ ಸ್ಪೇಷಾಲಿಟಿ ಹಾಸ್ಪಿಟಲ್ ಬೆಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ, ಕರ್ನಾಟಕ ಪ್ರೌಢ ಶಾಲೆ ಮಾಣಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಮಾಣಿ, ರೋಟರಿ ಕ್ಲಬ್ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ನಡೆದ ಉಚಿತ ಕೋವಿಡ್ ಲಸಿಕಾ ಶಿಬಿರವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಿದರು.

ಸುಮಾರು 6 ಕೋಟಿ‌ ವೆಚ್ಚದಲ್ಲಿ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರಕಾರ ಕ್ಕೆ ಪ್ರಸ್ತಾಪನೆ ಸಲ್ಲಿಸಲಾಗಿದೆ ಶೀಘ್ರವಾಗಿ ಈ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವುದರ ಜೊತೆಗೆ ಮಾಣಿ ಕರ್ನಾಟಕ ಪ್ರೌಢ ಶಾಲಾ ರಸ್ತೆ ಅಭಿವೃದ್ದಿಗೆ ರೂ 10 ಲಕ್ಷ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದರು.

1 ಲಕ್ಷ 70 ಸಾವಿರ ಲಸಿಕೆಯನ್ನು ತಾಲೂಕಿನಲ್ಲಿ ಈವರೆಗೆ ನೀಡಲಾಗಿದೆ. ಅದರಲ್ಲಿ 60 ವರ್ಷ ಮೇಲ್ಪಟ್ಟ ಸುಮಾರು 90 ಶೇಕಡಾ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.ಡಿಸೆಂಬರ್ ನೊಳಗೆ ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೆ ಲಸಿಕೆ ನೀಡಲು ಪ್ರಧಾನಿ ನರೇಂದ್ರ ಮೋದಿಯವರ ನೇತ್ರತ್ವದಲ್ಲಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ಭರವಸೆ ನೀಡಿದರು.

ಸಮರ್ಥ ವ್ಯಕ್ತಿಯ ವ್ಯಕ್ತಿತ್ವವನ್ನು ಕಷ್ಟಕಾಲದಲ್ಲಿ ಮಾತ್ರ ಅಳತೆ ಮಾಡಲು ಸಾಧ್ಯ ಅಂತಹ ಸಮರ್ಥ ವ್ಯಕ್ತಿಯ ಸಾಲಿನಲ್ಲಿ ಜಗತ್ತಿನಲ್ಲಿ ಪ್ರಧಾನಿ ಮೋದಿಯವರು ಹೆಸರು ಇದೆ ಎಂಬುದಕ್ಕೆ ಸಂತೋಷ ವಾಗಿದೆ.ಸಮರ್ಥವಾಗಿ ಕೋವಿಡ್ ನ್ನು ನಿಭಾಯಿಸಲು ಕೇಂದ್ರ ಸರಕಾರ ಯಶಸ್ವಿಯಾಗಿದೆ ಎಂದು ಅವರು ತಿಳಿಸಿದರು.

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ದ್ದರು.ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ವಿದ್ಯಾಭಿವರ್ಧಕ ಸಂಘ ಮಾಣಿ ಅಧ್ಯಕ್ಷ ಕಿರಣ್ ಹೆಗ್ಡೆ, ಉಪಾಧ್ಯಕ್ಷ ಮಹಮ್ಮದ್ ಹಬೀಬ್, ಕಾರ್ಯದರ್ಶಿ ಇಬ್ರಾಹಿಂ.ಕೆ.ಮಾಣಿ ಸ್ಕೌಟ್ & ಗೈಡ್ಸ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಪ್ರಹ್ಲಾದ ಶೆಟ್ಟಿ ಜಡ್ತಿಲ, ಬಂಟ್ವಾಳ ರೋಟರಿ ಕ್ಲಬ್ ನ ಕಾರ್ಯದರ್ಶಿ ಧನಂಜಯ ಬಾಳಿಗ, ಅಪೋಲೊ ಸ್ಪೆಶಾಲಿಟಿ ಆಸ್ಪತ್ರೆ ಬೆಂಗಳೂರು ಇದರ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಗಣೇಶ್ ನಾಗರಾಜ್ ಮತ್ತು ಆಯುಷ್, ಮುಖ್ಯೋಪಾಧ್ಯಾಯರಾದ ಬಿ.ಕೆ.ಭಂಡಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಶಶಿಕಲಾ, ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.


ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು.
ಶಾಸಕರ ಶಿಫಾರಸು ಮೇರೆಗೆ ಸಿ.ಎಸ್.ಅರ್.ಫಂಡ್ ಬಳಕೆ ಮಾಡಿಕೊಂಡು ಮಾಣಿಯಲ್ಲಿ
ಲಸಿಕೆ ಶಿಬಿರಕ್ಕೆ ಶ್ರಮಿಸಿದವರು ಬೆಂಗಳೂರಿನಲ್ಲಿ ಖಾಸಗಿ ಟಿ.ವಿ.ವಾಹಿನಿಯ ಸಿಬ್ಬಂದಿ ಮಾಣಿ
ಬದ್ರುದ್ದೀನ್ ಅವರಿಗೆ ಕೃತಜ್ಞತೆ ಸಲ್ಲಿಸಲಾಯಿತು.

- Advertisement -
spot_img

Latest News

error: Content is protected !!