Wednesday, May 8, 2024
Homeಕರಾವಳಿರೈತರ ಕಮಿಷನ್‌ನಲ್ಲಿ ಆದಾಯ ಪಡೆಯುವವರು ಕೃಷಿ ಕಾಯ್ದೆಯನ್ನು ವಿರೋಧಿಸಿತ್ತಾರೆ; ಶಾಸಕ ರಾಜೇಶ್ ನಾಯ್ಕ್

ರೈತರ ಕಮಿಷನ್‌ನಲ್ಲಿ ಆದಾಯ ಪಡೆಯುವವರು ಕೃಷಿ ಕಾಯ್ದೆಯನ್ನು ವಿರೋಧಿಸಿತ್ತಾರೆ; ಶಾಸಕ ರಾಜೇಶ್ ನಾಯ್ಕ್

spot_img
- Advertisement -
- Advertisement -

ಬಂಟ್ವಾಳ: ದೇಶದ 60-70 ಶೇ. ಮಂದಿ ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿದ್ದು, ಕೃಷಿ ಬೆಳೆದಾಗ ಮಾತ್ರ ದೇಶ ಬೆಳೆಯಲು ಸಾಧ್ಯ. ಆರ್ಥಿಕ ಅಭಿವೃದ್ಧಿಯ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳಲ್ಲಿ ಬದಲಾವಣೆ ತಂದಿದ್ದು, ರೈತರ ಕಮಿಷನ್‌ನಲ್ಲಿ ಆದಾಯ ಪಡೆಯುವವರು ಇದನ್ನು ವಿರೋಧಿಸುತ್ತಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಬಂಟ್ವಾಳ ಬಿಜೆಪಿ ರೈತ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಸಮಾರೋಪ ಭಾಷಣ ಮಾಡಿ ಮಾತನಾಡಿದ ಅವರು,ರೈತರ ವಿಶ್ವಾಸಗಳಿಸುವ ನಿಟ್ಟಿನಲ್ಲಿ ರೈತರ ಮನೆಗಳಲ್ಲೇ ಮೋರ್ಚಾದ ಸಭೆಗಳನ್ನು ಸಂಘಟಿಸುವ ಕೆಲಸ ಮಾಡಿ. ನಾವು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡಾಗ ಪ್ರಧಾನಿಯವರ ಬಲಿಷ್ಠ ಭಾರತ ನಿರ್ಮಾಣದ ಕನಸು ನನಸಾಗುತ್ತದೆ ಎಂದರು.


ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಅಣ್ಣಳಿಕೆ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಉಪಾಧ್ಯಕ್ಷ ಚಿದಾನಂದ, ಪಕ್ಷದ ಮುಂದಾಳು ಮಾಧವ ಮಾವೆ, ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ ಮಜಲು, ಬಂಟ್ವಾಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀರೇಂದ್ರ ಸಜೀಪ ಮೊದಲಾದವರು ಉಪಸ್ಥಿತರಿದ್ದರು.ಬಂಟ್ವಾಳ ರೈತ ಮೋರ್ಚಾ ಅಧ್ಯಕ್ಷ ವಿಶ್ವನಾಥ್ ಪೂಜಾರಿ ಸ್ವಾಗತಿಸಿ, ಪ್ರಣಾಮ್ ಅಜ್ಜಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು

- Advertisement -
spot_img

Latest News

error: Content is protected !!