Thursday, May 9, 2024
Homeಕರಾವಳಿಉಡುಪಿಉಡುಪಿ: ಹಿಜಾಬ್ ವಿವಾದ ಹುಟ್ಟಿಕೊಂಡ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ದಾಖಲಾತಿ ಹೆಚ್ಚಳ

ಉಡುಪಿ: ಹಿಜಾಬ್ ವಿವಾದ ಹುಟ್ಟಿಕೊಂಡ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ದಾಖಲಾತಿ ಹೆಚ್ಚಳ

spot_img
- Advertisement -
- Advertisement -

ಉಡುಪಿ: ರಾಜ್ಯದಲ್ಲಿ ಹಿಜಾಬ್ ಗಲಾಟೆ ಆರಂಭವಾಗಿದ್ದ ಉಡುಪಿ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ದಾಖಲಾತಿ ಆರಂಭಗೊಂಡಿದೆ. ಈ ಬಾರಿ ಮುಸ್ಲಿಂ ವಿದ್ಯಾರ್ಥಿನಿಯರ ದಾಖಲಾತಿ ಸಂಖ್ಯೆ ಹೆಚ್ಚಳವಾಗಿದೆ. ಇದೇ ಕಾಲೇಜಿನ ಆರು ವಿದ್ಯಾರ್ಥಿನಿಯರು ಹಿಜಾಬ್ ಪರವಾಗಿ ನ್ಯಾಯಾಲಯ ಮೆಟ್ಟಿಲೇರಿದ್ದರು. ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬಳಿಕವೂ ಹಿಜಾಬ್ ಧರಿಸಿ ಪರೀಕ್ಷೆ ಬರೆಯೋದಾಗಿ ಹಠ ಮಾಡಿದ್ದರು. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡದ ಹಿನ್ನೆಲೆ ಗೈರಾಗಿದ್ದರು.

ಇದೀಗ ಇದೇ ಕಾಲೇಜಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ದಾಖಲಾತಿ ಪಡೆದುಕೊಂಡಿದ್ದಾರೆ. ಹಿಜಾಬ್ ಗಲಾಟೆ ಬಳಿಕ ಉಡುಪಿ ಸರ್ಕಾರಿ ಮಹಿಳಾ ಪಿಯು ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿನಿಯರ ದಾಖಲಾತಿ ಕಡಿಮೆ ಆಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈಗಾಗಲೇ ಪ್ರಥಮ ಪಿಯುಸಿಗೆ 40 ವಿದ್ಯಾರ್ಥಿನಿಯರು ದಾಖಲಾತಿ ಪಡೆದುಕೊಂಡಿದ್ದು, ಹಿಜಾಬ್ ತೆಗೆದು ತರಗತಿಗೆ ಹಾಜರಾಗಲು ಒಪ್ಪಿಕೊಂಡಿದ್ದಾರೆ ಎಂದು ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಇನ್ನೂ  ಈ ಕುರಿತು ಕಾಲೇಜಿನ ಸಿಡಿಸಿ ಅಧ್ಯಕ್ಷ, ಉಡುಪಿ ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದಾರೆ. ದ್ವಿತೀಯ ಪಿಯುಗೆ  253 ವಿದ್ಯಾರ್ಥಿಗಳು ತೆರಳಿದ್ದು, ಪ್ರಥಮ ಪಿಯಗೆ 335 ವಿದ್ಯಾರ್ಥಿಗಳು ಅಡ್ಮಿಷನ್ ಮಾಡಿಸಿಕೊಂಡಿದ್ದಾರೆ. ಇನ್ನೂ 100 ಅರ್ಜಿಗಳು ಹೋಗಿದ್ದು, SSLC ಪೂರಕ ಪರೀಕ್ಷೆ ಬಳಿಕ ಉಳಿದ ಸ್ಥಾನಗಳು ಭರ್ತಿ ಆಗಲಿವೆ. ವಿಜ್ಞಾನದ ಎರಡು ಮತ್ತು ವಾಣಿಜ್ಯದ ಒಂದು ವಿಭಾಗ ಹೆಚ್ಚಳ ಮಾಡಲಾಗಿದೆ. ಕಂಪ್ಯೂಟರ್ ಸೈನ್ಸ್, ಜೀವಶಾಸ್ತ್ರ ಮತ್ತು ಭೌತಶಾಸ್ತ್ರದ ಹೊಸ ಪ್ರಯೋಗಾಲಯಗಳನ್ನು ಆರಂಭಿಸಲಾಗಿದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!