Monday, June 30, 2025
Homeತಾಜಾ ಸುದ್ದಿಯುಗಾದಿ ಹಬ್ಬದ ಹೊತ್ತಲ್ಲೇ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್- ಎಲ್‌ಪಿಜಿ ಸಿಲಿಂಡರ್‌ ದರ ₹250 ಹೆಚ್ಚಳ

ಯುಗಾದಿ ಹಬ್ಬದ ಹೊತ್ತಲ್ಲೇ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್- ಎಲ್‌ಪಿಜಿ ಸಿಲಿಂಡರ್‌ ದರ ₹250 ಹೆಚ್ಚಳ

spot_img
- Advertisement -
- Advertisement -

ನವದೆಹಲಿ: ಯುಗಾದಿ ಹಬ್ಬದ ಹೊತ್ತಲ್ಲೇ ದೇಶದ ಜನತೆಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಎಲ್‌.ಪಿ.ಜಿ. ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, ಇಂದಿನಿಂದ ಅಡುಗೆ ಅನಿಲ ಬೆಲೆ 250 ರೂ.ನಷ್ಟು ಏರಿಕೆಯಾಗಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ ಬೆಲೆ 2,253 ರೂಪಾಯಿಗೆ ಏರಿಕೆಯಾಗಿದೆ.

ಕಳೆದ ಎರಡು ತಿಂಗಳಲ್ಲಿ, 19-ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯು ಸಿಲಿಂಡರ್‌ಗೆ 346 ರೂ. ರಷ್ಟು ಏರಿಕೆಯಾಗಿದೆ. 2253 ರೂ.ಗೆ ತಲುಪಿದೆ. ಈ ಹಿಂದೆ ಮಾರ್ಚ್ 1 ರಂದು 19 ಕೆಜಿಯ ವಾಣಿಜ್ಯ ಸಿಲಿಂಡರ್ ದರವನ್ನು 105 ರೂ. ಹೆಚ್ಚಿಸಲಾಯಿತು. ನಂತರ ಮಾರ್ಚ್ 22 ರಂದು ಅದರ ಬೆಲೆ 9 ರೂ.ನಷ್ಟು ಕಡಿಮೆಯಾಗಿದೆ.

ಪಂಚ ರಾಜ್ಯ ಚುನಾವಣೆ ಬೆನ್ನಲ್ಲೇ ಮತ್ತೆ ದರ ಏರಿಕೆ ಬಿಸಿ ಗ್ರಾಹಕರಿಗೆ ತಟ್ಟಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ಮತ್ತು ಗ್ರಾಹಕವಾಗಿದೆ. ಭಾರತ ತನ್ನ ತೈಲ ಅಗತ್ಯದ ಸುಮಾರು 85% ನಷ್ಟು ಭಾಗವನ್ನು ಸಾಗರೋತ್ತರ ಮಾರುಕಟ್ಟೆಗಳಿಂದ ತರಿಸಿಕೊಳ್ಳುತ್ತಿದೆ.

ರಷ್ಯಾ ಮತ್ತು ಉಕ್ರೇನ್​ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಚ್ಛಾ ತೈಲದ ಬೆಲೆ ಏರಿಕೆಯಾಗಿದ್ದು, ಇದು ಜಾಗತಿಕ ತೈಲ ಬೆಲೆಗಳ ಮೇಲೆ ಗಣನೀಯ ಪ್ರಭಾವ ಬೀರಿದೆ. ಅಲ್ಲದೆ, ಯುಎಸ್​ ಡಾಲರ್​ ಎದುರು ರೂಪಾಯಿ ಮೌಲ್ಯ ಕುಸಿದಿರುವುದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ.ರಷ್ಯಾ ಮತ್ತು ಉಕ್ರೇನ್​ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಚ್ಛಾ ತೈಲದ ಬೆಲೆ ಏರಿಕೆಯಾಗಿದ್ದು, ಇದು ಜಾಗತಿಕ ತೈಲ ಬೆಲೆಗಳ ಮೇಲೆ ಗಣನೀಯ ಪ್ರಭಾವ ಬೀರಿದೆ. ಅಲ್ಲದೆ, ಯುಎಸ್​ ಡಾಲರ್​ ಎದುರು ರೂಪಾಯಿ ಮೌಲ್ಯ ಕುಸಿದಿರುವುದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ.

- Advertisement -
spot_img

Latest News

error: Content is protected !!