Sunday, June 7, 2026
Homeಪ್ರಮುಖ-ಸುದ್ದಿಕೊರೊನಾ ಬಗ್ಗೆ ಬೇಡ ಭಯ, ರಾಜ್ಯದಲ್ಲಿ ಗುಣಮುಖರಾಗುವವರ ಪ್ರಮಾಣದಲ್ಲಿ ಶೇ.5 ರಷ್ಟು ಏರಿಕೆ

ಕೊರೊನಾ ಬಗ್ಗೆ ಬೇಡ ಭಯ, ರಾಜ್ಯದಲ್ಲಿ ಗುಣಮುಖರಾಗುವವರ ಪ್ರಮಾಣದಲ್ಲಿ ಶೇ.5 ರಷ್ಟು ಏರಿಕೆ

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾಗುವವರ ಪ್ರಮಾಣವು ಕಳೆದೊಂದು ವಾರದಲ್ಲಿ ಶೇ.5.67 ರಷ್ಟು ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ‌ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

‘ಪ್ರತಿ ದಿನ ಗುಣಮುಖರಾಗುವವರ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಬೆಂಗಳೂರು ನಗರದಲ್ಲಿ ಈ ಪ್ರಮಾಣ ಶೇ.9.17 ರಷ್ಟು ಏರಿಕೆ ಕಂಡಿದೆ. ಭಾನುವಾರ ಸಂಜೆಯ ವೇಳೆಗೆ ರಾಜ್ಯದ ಚೇತರಿಕೆ ಪ್ರಮಾಣ ಶೇ.42.81 ಮತ್ತು ಬೆಂಗಳೂರಿನಲ್ಲಿ ಶೇ.35.14 ರಷ್ಟು ಇತ್ತು’, ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಒಂದು ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೆ, ಮತ್ತೊಂದು ಕಡೆ ಗುಣಮುಖವಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿರೋದು ಸಮಾಧಾನಕರ ಸಂಗತಿ. ಹಾಗಾಗಿ ಜನ ಆದಷ್ಟು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಧೈರ್ಯವಾಗಿರಬೇಕು .

- Advertisement -

Latest News

error: Content is protected !!