Thursday, June 4, 2026
Homeಕ್ರೀಡೆಭಾರತ-ಆಸ್ಟ್ರೇಲಿಯಾ ಬಾಕ್ಸಿಂಗ್ ಡೇ ಟೆಸ್ಟ್: ಟೀಂ ಇಂಡಿಯಾಗೆ ಭರ್ಜರಿ ಗೆಲುವು

ಭಾರತ-ಆಸ್ಟ್ರೇಲಿಯಾ ಬಾಕ್ಸಿಂಗ್ ಡೇ ಟೆಸ್ಟ್: ಟೀಂ ಇಂಡಿಯಾಗೆ ಭರ್ಜರಿ ಗೆಲುವು

- Advertisement -
- Advertisement -

ಮೆಲ್ಬೋರ್ನ್: ಭಾರತ-ಆಸ್ಟ್ರೇಲಿಯಾ ನಡುವಿನ 2 ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಮೆಲ್ಬರ್ನ್ ಅಂಗಳದಲ್ಲಿ ಎಂಟು ವಿಕೆಟ್ ಅಂತರದ ಗೆಲವು ಸಾಧಿಸಿದ ರಹಾನೆ ಪಡೆ ಸರಣಿಯಲ್ಲಿ ಸಮಬಲ (1-1) ಸಾಧಿಸಿದೆ.

ನಾಲ್ಕನೇ ದಿನವಾದ ಮಂಗಳವಾರ ಬೆಳಗ್ಗೆ ಆರು ವಿಕೆಟ್‌ ಕಳೆದುಕೊಂಡು 133 ರನ್‌ಗಳಿಂದ ದ್ವಿತೀಯ ಇನಿಂಗ್ಸ್‌ ಮುಂದುವರಿಸಿದ ಆಸ್ಟ್ರೇಲಿಯಾ, 103.1 ಓವರ್‌ಗಳಿಗೆ 200 ರನ್‌ಗಳಿಗೆ ಆಲೌಟ್‌ ಆಯಿತು. ಇದರೊಂದಿಗೆ ಭಾರತ ತಂಡಕ್ಕೆ 70 ರನ್‌ಗಳ ಸಾಧಾರಣ ಗುರಿ ನೀಡಿತು. ಭಾರತೀಯ ತಂಡದ ಬೌಲಿಂಗ್ ನಲ್ಲಿ ಸಿರಾಜ್ ಮೂರು ವಿಕೆಟ್, ಬುಮ್ರಾ, ಅಶ್ವಿನ್, ಜಡೇಜಾ ತಲಾ ಎರಡು ವಿಕೆಟ್ ಪಡೆದರು. ಉಮೇಶ್ ಯಾದವ್ ಒಂದು ವಿಕೆಟ್ ಪಡೆದರು.

ಗೆಲುವಿಗೆ 70 ರನ್ ಗುರಿ ಪಡೆದ ಟೀಂ ಇಂಡಿಯಾ ಎರಡು ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಆರಂಭದಲ್ಲೇ ಮಯಾಂಕ್ ಅಗರ್ವಾಲ್ ಮತ್ತು ಚೇತೇಶ್ವರ ಪೂಜಾರ ವಿಕೆಟ್ ಕಳೆದುಕೊಂಡ ಭಾರತಕ್ಕೆ ಶುಭ್ಮನ್ ಗಿಲ್ (35 ರನ್ ) ಮತ್ತು ನಾಯಕ ಅಜಿಂಕ್ಯ ರಹಾನೆ ( 27 ರನ್) ಆಧರಿಸಿದರು.

- Advertisement -

Latest News

error: Content is protected !!