Sunday, April 28, 2024
Homeಕ್ರೀಡೆಬಾರ್ಡರ್‌-ಗಾವಸ್ಕರ್ ಟ್ರೋಫಿ ಟೆಸ್ಟ್: ಭೋಜನ ವಿರಾಮಕ್ಕೆ 4 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿದ ಭಾರತ

ಬಾರ್ಡರ್‌-ಗಾವಸ್ಕರ್ ಟ್ರೋಫಿ ಟೆಸ್ಟ್: ಭೋಜನ ವಿರಾಮಕ್ಕೆ 4 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿದ ಭಾರತ

spot_img
- Advertisement -
- Advertisement -

ಬ್ರಿಸ್ಬೇನ್: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಗಾಬಾದಲ್ಲಿ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಭೋಜನ ವಿರಾಮದ ಹೊತ್ತಿಗೆ ಟೀಮ್ ಇಂಡಿಯಾ 60 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿದೆ.

ಟೀಮ್ ಇಂಡಿಯಾ ಇನ್ನಿಂಗ್ಸ್ ಮುನ್ನಡೆಗಾಗಿ ಇನ್ನು ಆರು ವಿಕೆಟ್ ಬಾಕಿ ಉಳಿದಿರುವಂತೆಯೇ 208 ರನ್ ಗಳಿಸಬೇಕಾದ ಅಗತ್ಯವಿದೆ. ಆಸೀಸ್ ಮೊದಲ ಇನ್ನಿಂಗ್ಸ್ ನಲ್ಲಿ 369 ರನ್ ಗಳಿಸಿತ್ತು. ಕನ್ನಡಿಗ ಮಯಾಂಕ್ ಅಗರ್ವಾಲ್ ಮತ್ತು ರಿಷಭ್ ಪಂತ್ ಕ್ರೀಸ್ ನಲ್ಲಿದ್ದು, ಉತ್ತಮ ಜೊತೆಯಾಟದ ಲೆಕ್ಕಾಚಾರದಲ್ಲಿದ್ದಾರೆ.

ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ತಂಡ ಎರಡು ವಿಕೆಟ್ ನಷ್ಟಕ್ಕೆ 62 ರನ್ ಗಳಿಸಿತ್ತು. 25 ರನ್ ಗಳಿಸಿದ ಚೇತೇಶ್ವರ ಪೂಜಾರ ಇಂದು ಮೊದಲನೆಯವರಾಗಿ ಔಟಾದರು. ನಾಯಕ ಅಜಿಂಕ್ಯ ರಹಾನೆ 37 ರನ್ ಗಳಿಸಿ ಸ್ಟಾರ್ಕ್ ಗೆ ವಿಕೆಟ್ ಒಪ್ಪಿಸಿದರು. ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಆಗಮಿಸಿದ ಮಯಾಂಕ್ 38 ರನ್ ಗಳಿಸಿ ಆಡುತ್ತಿದ್ದಾರೆ. ರಿಷಭ್ ಪಂತ್ ನಾಲ್ಕು ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ಆಸೀಸ್ ಪರ ಸ್ಟಾರ್ಕ್, ಹ್ಯಾಜಲ್ ವುಡ್, ಕಮಿನ್ಸ್ ಮತ್ತು ಲಯಾನ್ ತಲಾ ಒಂದು ವಿಕೆಟ್ ಪಡೆದರು.

- Advertisement -
spot_img

Latest News

error: Content is protected !!