- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಮಂಗಳೂರಿನಲ್ಲಿ ನಡೆಯಿತು.
ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ತೆರೆದ ವಾಹನದಲ್ಲಿ ಪೆರೇಡ್ ವೀಕ್ಷಣೆ ಮಾಡಿ ಗೌರವ ವಂದನೆ ಸ್ವೀಕರಿಸಿದರು.ಪೊಲೀಸ್ ಪಡೆ, ಅಗ್ನಿಶಾಮಕ ದಳ ಸೇರಿದಂತೆ ವಿವಿಧ ತಂಡಗಳಿಂದ ಆಕರ್ಷಕ ಪಥಸಂಚನ ನಡೆಯಿತು.
ಸಮಾರಂಭದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಭಾಗವಹಿಸಿದ್ದರು.
- Advertisement -